ಕೀರ್ತನೆಗಳು 125 : 1 (KNV)
ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ಕೀರ್ತನೆಗಳು 125 : 2 (KNV)
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ಕೀರ್ತನೆಗಳು 125 : 3 (KNV)
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ಕೀರ್ತನೆಗಳು 125 : 4 (KNV)
ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಕೀರ್ತನೆಗಳು 125 : 5 (KNV)
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.

1 2 3 4 5

BG:

Opacity:

Color:


Size:


Font: