ಕೀರ್ತನೆಗಳು 135 : 1 (KNV)
ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ
ಕೀರ್ತನೆಗಳು 135 : 2 (KNV)
ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
ಕೀರ್ತನೆಗಳು 135 : 3 (KNV)
ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
ಕೀರ್ತನೆಗಳು 135 : 4 (KNV)
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ಕೀರ್ತನೆಗಳು 135 : 5 (KNV)
ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
ಕೀರ್ತನೆಗಳು 135 : 6 (KNV)
ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
ಕೀರ್ತನೆಗಳು 135 : 7 (KNV)
ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
ಕೀರ್ತನೆಗಳು 135 : 8 (KNV)
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಕೀರ್ತನೆಗಳು 135 : 9 (KNV)
ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
ಕೀರ್ತನೆಗಳು 135 : 10 (KNV)
ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
ಕೀರ್ತನೆಗಳು 135 : 11 (KNV)
ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
ಕೀರ್ತನೆಗಳು 135 : 12 (KNV)
ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
ಕೀರ್ತನೆಗಳು 135 : 13 (KNV)
ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
ಕೀರ್ತನೆಗಳು 135 : 14 (KNV)
ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
ಕೀರ್ತನೆಗಳು 135 : 15 (KNV)
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಕೀರ್ತನೆಗಳು 135 : 16 (KNV)
ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
ಕೀರ್ತನೆಗಳು 135 : 17 (KNV)
ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
ಕೀರ್ತನೆಗಳು 135 : 18 (KNV)
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಕೀರ್ತನೆಗಳು 135 : 19 (KNV)
ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
ಕೀರ್ತನೆಗಳು 135 : 20 (KNV)
ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
ಕೀರ್ತನೆಗಳು 135 : 21 (KNV)
ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: