ಕೀರ್ತನೆಗಳು 44 : 1 (KNV)
ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ಕೀರ್ತನೆಗಳು 44 : 2 (KNV)
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಕೀರ್ತನೆಗಳು 44 : 3 (KNV)
ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ಕೀರ್ತನೆಗಳು 44 : 4 (KNV)
ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
ಕೀರ್ತನೆಗಳು 44 : 5 (KNV)
ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
ಕೀರ್ತನೆಗಳು 44 : 6 (KNV)
ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
ಕೀರ್ತನೆಗಳು 44 : 7 (KNV)
ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
ಕೀರ್ತನೆಗಳು 44 : 8 (KNV)
ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
ಕೀರ್ತನೆಗಳು 44 : 9 (KNV)
ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
ಕೀರ್ತನೆಗಳು 44 : 10 (KNV)
ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
ಕೀರ್ತನೆಗಳು 44 : 11 (KNV)
ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
ಕೀರ್ತನೆಗಳು 44 : 12 (KNV)
ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
ಕೀರ್ತನೆಗಳು 44 : 13 (KNV)
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ಕೀರ್ತನೆಗಳು 44 : 14 (KNV)
ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
ಕೀರ್ತನೆಗಳು 44 : 15 (KNV)
ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
ಕೀರ್ತನೆಗಳು 44 : 16 (KNV)
ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
ಕೀರ್ತನೆಗಳು 44 : 17 (KNV)
ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
ಕೀರ್ತನೆಗಳು 44 : 18 (KNV)
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
ಕೀರ್ತನೆಗಳು 44 : 19 (KNV)
ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
ಕೀರ್ತನೆಗಳು 44 : 20 (KNV)
ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
ಕೀರ್ತನೆಗಳು 44 : 21 (KNV)
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಕೀರ್ತನೆಗಳು 44 : 22 (KNV)
ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
ಕೀರ್ತನೆಗಳು 44 : 23 (KNV)
ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
ಕೀರ್ತನೆಗಳು 44 : 24 (KNV)
ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
ಕೀರ್ತನೆಗಳು 44 : 25 (KNV)
ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
ಕೀರ್ತನೆಗಳು 44 : 26 (KNV)
ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: