ಕೀರ್ತನೆಗಳು 66 : 1 (KNV)
ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
ಕೀರ್ತನೆಗಳು 66 : 2 (KNV)
ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
ಕೀರ್ತನೆಗಳು 66 : 3 (KNV)
ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
ಕೀರ್ತನೆಗಳು 66 : 4 (KNV)
ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
ಕೀರ್ತನೆಗಳು 66 : 5 (KNV)
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
ಕೀರ್ತನೆಗಳು 66 : 6 (KNV)
ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
ಕೀರ್ತನೆಗಳು 66 : 7 (KNV)
ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
ಕೀರ್ತನೆಗಳು 66 : 8 (KNV)
ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.
ಕೀರ್ತನೆಗಳು 66 : 9 (KNV)
ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
ಕೀರ್ತನೆಗಳು 66 : 10 (KNV)
ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
ಕೀರ್ತನೆಗಳು 66 : 11 (KNV)
ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
ಕೀರ್ತನೆಗಳು 66 : 12 (KNV)
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ಕೀರ್ತನೆಗಳು 66 : 13 (KNV)
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ಕೀರ್ತನೆಗಳು 66 : 14 (KNV)
ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
ಕೀರ್ತನೆಗಳು 66 : 15 (KNV)
ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
ಕೀರ್ತನೆಗಳು 66 : 16 (KNV)
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
ಕೀರ್ತನೆಗಳು 66 : 17 (KNV)
ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
ಕೀರ್ತನೆಗಳು 66 : 18 (KNV)
ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
ಕೀರ್ತನೆಗಳು 66 : 19 (KNV)
ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
ಕೀರ್ತನೆಗಳು 66 : 20 (KNV)
ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: