ಕೀರ್ತನೆಗಳು 69 : 1 (KNV)
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ಕೀರ್ತನೆಗಳು 69 : 2 (KNV)
ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
ಕೀರ್ತನೆಗಳು 69 : 3 (KNV)
ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
ಕೀರ್ತನೆಗಳು 69 : 4 (KNV)
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ಕೀರ್ತನೆಗಳು 69 : 5 (KNV)
ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
ಕೀರ್ತನೆಗಳು 69 : 6 (KNV)
ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
ಕೀರ್ತನೆಗಳು 69 : 7 (KNV)
ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
ಕೀರ್ತನೆಗಳು 69 : 8 (KNV)
ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
ಕೀರ್ತನೆಗಳು 69 : 9 (KNV)
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ಕೀರ್ತನೆಗಳು 69 : 10 (KNV)
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
ಕೀರ್ತನೆಗಳು 69 : 11 (KNV)
ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
ಕೀರ್ತನೆಗಳು 69 : 12 (KNV)
ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
ಕೀರ್ತನೆಗಳು 69 : 13 (KNV)
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ಕೀರ್ತನೆಗಳು 69 : 14 (KNV)
ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
ಕೀರ್ತನೆಗಳು 69 : 15 (KNV)
ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
ಕೀರ್ತನೆಗಳು 69 : 16 (KNV)
ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
ಕೀರ್ತನೆಗಳು 69 : 17 (KNV)
ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
ಕೀರ್ತನೆಗಳು 69 : 18 (KNV)
ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
ಕೀರ್ತನೆಗಳು 69 : 19 (KNV)
ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
ಕೀರ್ತನೆಗಳು 69 : 20 (KNV)
ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ಕೀರ್ತನೆಗಳು 69 : 21 (KNV)
ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
ಕೀರ್ತನೆಗಳು 69 : 22 (KNV)
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ಕೀರ್ತನೆಗಳು 69 : 23 (KNV)
ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
ಕೀರ್ತನೆಗಳು 69 : 24 (KNV)
ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
ಕೀರ್ತನೆಗಳು 69 : 25 (KNV)
ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
ಕೀರ್ತನೆಗಳು 69 : 26 (KNV)
ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
ಕೀರ್ತನೆಗಳು 69 : 27 (KNV)
ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
ಕೀರ್ತನೆಗಳು 69 : 28 (KNV)
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಕೀರ್ತನೆಗಳು 69 : 29 (KNV)
ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
ಕೀರ್ತನೆಗಳು 69 : 30 (KNV)
ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
ಕೀರ್ತನೆಗಳು 69 : 31 (KNV)
ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
ಕೀರ್ತನೆಗಳು 69 : 32 (KNV)
ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
ಕೀರ್ತನೆಗಳು 69 : 33 (KNV)
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
ಕೀರ್ತನೆಗಳು 69 : 34 (KNV)
ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
ಕೀರ್ತನೆಗಳು 69 : 35 (KNV)
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ಕೀರ್ತನೆಗಳು 69 : 36 (KNV)
ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: