ಕೀರ್ತನೆಗಳು 72 : 1 (KNV)
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಕೀರ್ತನೆಗಳು 72 : 2 (KNV)
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ಕೀರ್ತನೆಗಳು 72 : 3 (KNV)
ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
ಕೀರ್ತನೆಗಳು 72 : 4 (KNV)
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಕೀರ್ತನೆಗಳು 72 : 5 (KNV)
ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
ಕೀರ್ತನೆಗಳು 72 : 6 (KNV)
ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
ಕೀರ್ತನೆಗಳು 72 : 7 (KNV)
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಕೀರ್ತನೆಗಳು 72 : 8 (KNV)
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಕೀರ್ತನೆಗಳು 72 : 9 (KNV)
ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
ಕೀರ್ತನೆಗಳು 72 : 10 (KNV)
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಕೀರ್ತನೆಗಳು 72 : 11 (KNV)
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ಕೀರ್ತನೆಗಳು 72 : 12 (KNV)
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಕೀರ್ತನೆಗಳು 72 : 13 (KNV)
ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
ಕೀರ್ತನೆಗಳು 72 : 14 (KNV)
ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
ಕೀರ್ತನೆಗಳು 72 : 15 (KNV)
ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
ಕೀರ್ತನೆಗಳು 72 : 16 (KNV)
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ಕೀರ್ತನೆಗಳು 72 : 17 (KNV)
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಕೀರ್ತನೆಗಳು 72 : 18 (KNV)
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
ಕೀರ್ತನೆಗಳು 72 : 19 (KNV)
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಕೀರ್ತನೆಗಳು 72 : 20 (KNV)
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: