ಕೀರ್ತನೆಗಳು 73 : 1 (KNV)
ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
ಕೀರ್ತನೆಗಳು 73 : 2 (KNV)
ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
ಕೀರ್ತನೆಗಳು 73 : 3 (KNV)
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಕೀರ್ತನೆಗಳು 73 : 4 (KNV)
ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
ಕೀರ್ತನೆಗಳು 73 : 5 (KNV)
ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
ಕೀರ್ತನೆಗಳು 73 : 6 (KNV)
ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
ಕೀರ್ತನೆಗಳು 73 : 7 (KNV)
ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
ಕೀರ್ತನೆಗಳು 73 : 8 (KNV)
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ಕೀರ್ತನೆಗಳು 73 : 9 (KNV)
ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
ಕೀರ್ತನೆಗಳು 73 : 10 (KNV)
ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.
ಕೀರ್ತನೆಗಳು 73 : 11 (KNV)
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ಕೀರ್ತನೆಗಳು 73 : 12 (KNV)
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ಕೀರ್ತನೆಗಳು 73 : 13 (KNV)
ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
ಕೀರ್ತನೆಗಳು 73 : 14 (KNV)
ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
ಕೀರ್ತನೆಗಳು 73 : 15 (KNV)
ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
ಕೀರ್ತನೆಗಳು 73 : 16 (KNV)
ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
ಕೀರ್ತನೆಗಳು 73 : 17 (KNV)
ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
ಕೀರ್ತನೆಗಳು 73 : 18 (KNV)
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಕೀರ್ತನೆಗಳು 73 : 19 (KNV)
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಕೀರ್ತನೆಗಳು 73 : 20 (KNV)
ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
ಕೀರ್ತನೆಗಳು 73 : 21 (KNV)
ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
ಕೀರ್ತನೆಗಳು 73 : 22 (KNV)
ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
ಕೀರ್ತನೆಗಳು 73 : 23 (KNV)
ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
ಕೀರ್ತನೆಗಳು 73 : 24 (KNV)
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಕೀರ್ತನೆಗಳು 73 : 25 (KNV)
ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
ಕೀರ್ತನೆಗಳು 73 : 26 (KNV)
ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
ಕೀರ್ತನೆಗಳು 73 : 27 (KNV)
ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ಕೀರ್ತನೆಗಳು 73 : 28 (KNV)
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: