ಕೀರ್ತನೆಗಳು 79 : 1 (KNV)
ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
ಕೀರ್ತನೆಗಳು 79 : 2 (KNV)
ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
ಕೀರ್ತನೆಗಳು 79 : 3 (KNV)
ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
ಕೀರ್ತನೆಗಳು 79 : 4 (KNV)
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಕೀರ್ತನೆಗಳು 79 : 5 (KNV)
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ಕೀರ್ತನೆಗಳು 79 : 6 (KNV)
ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
ಕೀರ್ತನೆಗಳು 79 : 7 (KNV)
ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
ಕೀರ್ತನೆಗಳು 79 : 8 (KNV)
ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
ಕೀರ್ತನೆಗಳು 79 : 9 (KNV)
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ಕೀರ್ತನೆಗಳು 79 : 10 (KNV)
ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
ಕೀರ್ತನೆಗಳು 79 : 11 (KNV)
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ಕೀರ್ತನೆಗಳು 79 : 12 (KNV)
ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
ಕೀರ್ತನೆಗಳು 79 : 13 (KNV)
ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.

1 2 3 4 5 6 7 8 9 10 11 12 13

BG:

Opacity:

Color:


Size:


Font: