ಕೀರ್ತನೆಗಳು 88 : 1 (KNV)
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ಕೀರ್ತನೆಗಳು 88 : 2 (KNV)
ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
ಕೀರ್ತನೆಗಳು 88 : 3 (KNV)
ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
ಕೀರ್ತನೆಗಳು 88 : 4 (KNV)
ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
ಕೀರ್ತನೆಗಳು 88 : 5 (KNV)
ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
ಕೀರ್ತನೆಗಳು 88 : 6 (KNV)
ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
ಕೀರ್ತನೆಗಳು 88 : 7 (KNV)
ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
ಕೀರ್ತನೆಗಳು 88 : 8 (KNV)
ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
ಕೀರ್ತನೆಗಳು 88 : 9 (KNV)
ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
ಕೀರ್ತನೆಗಳು 88 : 10 (KNV)
ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
ಕೀರ್ತನೆಗಳು 88 : 11 (KNV)
ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
ಕೀರ್ತನೆಗಳು 88 : 12 (KNV)
ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
ಕೀರ್ತನೆಗಳು 88 : 13 (KNV)
ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
ಕೀರ್ತನೆಗಳು 88 : 14 (KNV)
ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
ಕೀರ್ತನೆಗಳು 88 : 15 (KNV)
ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
ಕೀರ್ತನೆಗಳು 88 : 16 (KNV)
ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
ಕೀರ್ತನೆಗಳು 88 : 17 (KNV)
ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
ಕೀರ್ತನೆಗಳು 88 : 18 (KNV)
ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: