ವಿಮೋಚನಕಾಂಡ 1 : 1 (KNV)
ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ:
ವಿಮೋಚನಕಾಂಡ 1 : 2 (KNV)
ರೂಬೇನ್ ಸಿಮೆಯೋನ್ ಲೇವಿ ಯೆಹೂದ
ವಿಮೋಚನಕಾಂಡ 1 : 3 (KNV)
ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್
ವಿಮೋಚನಕಾಂಡ 1 : 4 (KNV)
ದಾನ್ ನಫ್ತಾಲಿ ಗಾದ್ ಆಶೇರ್.
ವಿಮೋಚನಕಾಂಡ 1 : 5 (KNV)
ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
ವಿಮೋಚನಕಾಂಡ 1 : 6 (KNV)
ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
ವಿಮೋಚನಕಾಂಡ 1 : 7 (KNV)
ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
ವಿಮೋಚನಕಾಂಡ 1 : 8 (KNV)
ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
ವಿಮೋಚನಕಾಂಡ 1 : 9 (KNV)
ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
ವಿಮೋಚನಕಾಂಡ 1 : 10 (KNV)
ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
ವಿಮೋಚನಕಾಂಡ 1 : 11 (KNV)
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
ವಿಮೋಚನಕಾಂಡ 1 : 12 (KNV)
ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
ವಿಮೋಚನಕಾಂಡ 1 : 13 (KNV)
ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
ವಿಮೋಚನಕಾಂಡ 1 : 14 (KNV)
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ವಿಮೋಚನಕಾಂಡ 1 : 15 (KNV)
ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
ವಿಮೋಚನಕಾಂಡ 1 : 16 (KNV)
ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
ವಿಮೋಚನಕಾಂಡ 1 : 17 (KNV)
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
ವಿಮೋಚನಕಾಂಡ 1 : 18 (KNV)
ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
ವಿಮೋಚನಕಾಂಡ 1 : 19 (KNV)
ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
ವಿಮೋಚನಕಾಂಡ 1 : 20 (KNV)
ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
ವಿಮೋಚನಕಾಂಡ 1 : 21 (KNV)
ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.
ವಿಮೋಚನಕಾಂಡ 1 : 22 (KNV)
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
❮
❯