ವಿಮೋಚನಕಾಂಡ 14 : 1 (KNV)
ಕರ್ತನು ಮಾತನಾಡಿ ಮೋಶೆಗೆ--
ವಿಮೋಚನಕಾಂಡ 14 : 2 (KNV)
ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
ವಿಮೋಚನಕಾಂಡ 14 : 3 (KNV)
ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
ವಿಮೋಚನಕಾಂಡ 14 : 4 (KNV)
ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
ವಿಮೋಚನಕಾಂಡ 14 : 5 (KNV)
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ವಿಮೋಚನಕಾಂಡ 14 : 6 (KNV)
ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
ವಿಮೋಚನಕಾಂಡ 14 : 7 (KNV)
ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
ವಿಮೋಚನಕಾಂಡ 14 : 8 (KNV)
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ವಿಮೋಚನಕಾಂಡ 14 : 9 (KNV)
ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
ವಿಮೋಚನಕಾಂಡ 14 : 10 (KNV)
ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
ವಿಮೋಚನಕಾಂಡ 14 : 11 (KNV)
ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
ವಿಮೋಚನಕಾಂಡ 14 : 12 (KNV)
ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
ವಿಮೋಚನಕಾಂಡ 14 : 13 (KNV)
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ವಿಮೋಚನಕಾಂಡ 14 : 14 (KNV)
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
ವಿಮೋಚನಕಾಂಡ 14 : 15 (KNV)
ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್‌ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
ವಿಮೋಚನಕಾಂಡ 14 : 16 (KNV)
ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
ವಿಮೋಚನಕಾಂಡ 14 : 17 (KNV)
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ವಿಮೋಚನಕಾಂಡ 14 : 18 (KNV)
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ವಿಮೋಚನಕಾಂಡ 14 : 19 (KNV)
ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ವಿಮೋಚನಕಾಂಡ 14 : 20 (KNV)
ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
ವಿಮೋಚನಕಾಂಡ 14 : 21 (KNV)
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ವಿಮೋಚನಕಾಂಡ 14 : 22 (KNV)
ಹೀಗೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ವಿಮೋಚನಕಾಂಡ 14 : 23 (KNV)
ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
ವಿಮೋಚನಕಾಂಡ 14 : 24 (KNV)
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ವಿಮೋಚನಕಾಂಡ 14 : 25 (KNV)
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
ವಿಮೋಚನಕಾಂಡ 14 : 26 (KNV)
ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
ವಿಮೋಚನಕಾಂಡ 14 : 27 (KNV)
ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
ವಿಮೋಚನಕಾಂಡ 14 : 28 (KNV)
ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
ವಿಮೋಚನಕಾಂಡ 14 : 29 (KNV)
ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ವಿಮೋಚನಕಾಂಡ 14 : 30 (KNV)
ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ವಿಮೋಚನಕಾಂಡ 14 : 31 (KNV)
ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: