ವಿಮೋಚನಕಾಂಡ 21 : 1 (KNV)
ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
ವಿಮೋಚನಕಾಂಡ 21 : 2 (KNV)
ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
ವಿಮೋಚನಕಾಂಡ 21 : 3 (KNV)
ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
ವಿಮೋಚನಕಾಂಡ 21 : 4 (KNV)
ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
ವಿಮೋಚನಕಾಂಡ 21 : 5 (KNV)
ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
ವಿಮೋಚನಕಾಂಡ 21 : 6 (KNV)
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
ವಿಮೋಚನಕಾಂಡ 21 : 7 (KNV)
ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
ವಿಮೋಚನಕಾಂಡ 21 : 8 (KNV)
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
ವಿಮೋಚನಕಾಂಡ 21 : 9 (KNV)
ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.
ವಿಮೋಚನಕಾಂಡ 21 : 10 (KNV)
ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
ವಿಮೋಚನಕಾಂಡ 21 : 11 (KNV)
ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
ವಿಮೋಚನಕಾಂಡ 21 : 12 (KNV)
ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
ವಿಮೋಚನಕಾಂಡ 21 : 13 (KNV)
ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
ವಿಮೋಚನಕಾಂಡ 21 : 14 (KNV)
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
ವಿಮೋಚನಕಾಂಡ 21 : 15 (KNV)
ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
ವಿಮೋಚನಕಾಂಡ 21 : 16 (KNV)
ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
ವಿಮೋಚನಕಾಂಡ 21 : 17 (KNV)
ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
ವಿಮೋಚನಕಾಂಡ 21 : 18 (KNV)
ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
ವಿಮೋಚನಕಾಂಡ 21 : 19 (KNV)
ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
ವಿಮೋಚನಕಾಂಡ 21 : 20 (KNV)
ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
ವಿಮೋಚನಕಾಂಡ 21 : 21 (KNV)
ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.
ವಿಮೋಚನಕಾಂಡ 21 : 22 (KNV)
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
ವಿಮೋಚನಕಾಂಡ 21 : 23 (KNV)
ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
ವಿಮೋಚನಕಾಂಡ 21 : 24 (KNV)
ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
ವಿಮೋಚನಕಾಂಡ 21 : 25 (KNV)
ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
ವಿಮೋಚನಕಾಂಡ 21 : 26 (KNV)
ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
ವಿಮೋಚನಕಾಂಡ 21 : 27 (KNV)
ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
ವಿಮೋಚನಕಾಂಡ 21 : 28 (KNV)
ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
ವಿಮೋಚನಕಾಂಡ 21 : 29 (KNV)
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
ವಿಮೋಚನಕಾಂಡ 21 : 30 (KNV)
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
ವಿಮೋಚನಕಾಂಡ 21 : 31 (KNV)
ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
ವಿಮೋಚನಕಾಂಡ 21 : 32 (KNV)
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
ವಿಮೋಚನಕಾಂಡ 21 : 33 (KNV)
ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
ವಿಮೋಚನಕಾಂಡ 21 : 34 (KNV)
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ವಿಮೋಚನಕಾಂಡ 21 : 35 (KNV)
ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ವಿಮೋಚನಕಾಂಡ 21 : 36 (KNV)
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: