ವಿಮೋಚನಕಾಂಡ 28 : 1 (KNV)
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ವಿಮೋಚನಕಾಂಡ 28 : 2 (KNV)
ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
ವಿಮೋಚನಕಾಂಡ 28 : 3 (KNV)
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ವಿಮೋಚನಕಾಂಡ 28 : 4 (KNV)
ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ವಿಮೋಚನಕಾಂಡ 28 : 5 (KNV)
ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
ವಿಮೋಚನಕಾಂಡ 28 : 6 (KNV)
ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
ವಿಮೋಚನಕಾಂಡ 28 : 7 (KNV)
ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
ವಿಮೋಚನಕಾಂಡ 28 : 8 (KNV)
ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
ವಿಮೋಚನಕಾಂಡ 28 : 9 (KNV)
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ವಿಮೋಚನಕಾಂಡ 28 : 10 (KNV)
ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
ವಿಮೋಚನಕಾಂಡ 28 : 11 (KNV)
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ವಿಮೋಚನಕಾಂಡ 28 : 12 (KNV)
ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
ವಿಮೋಚನಕಾಂಡ 28 : 13 (KNV)
ನೀನು ಬಂಗಾರದ ಜವೆಗಳನ್ನು ಮಾಡಬೇಕು.
ವಿಮೋಚನಕಾಂಡ 28 : 14 (KNV)
ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
ವಿಮೋಚನಕಾಂಡ 28 : 15 (KNV)
ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
ವಿಮೋಚನಕಾಂಡ 28 : 16 (KNV)
ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
ವಿಮೋಚನಕಾಂಡ 28 : 17 (KNV)
ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ವಿಮೋಚನಕಾಂಡ 28 : 18 (KNV)
ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
ವಿಮೋಚನಕಾಂಡ 28 : 19 (KNV)
ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
ವಿಮೋಚನಕಾಂಡ 28 : 20 (KNV)
ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
ವಿಮೋಚನಕಾಂಡ 28 : 21 (KNV)
ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
ವಿಮೋಚನಕಾಂಡ 28 : 22 (KNV)
ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
ವಿಮೋಚನಕಾಂಡ 28 : 23 (KNV)
ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
ವಿಮೋಚನಕಾಂಡ 28 : 24 (KNV)
ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.
ವಿಮೋಚನಕಾಂಡ 28 : 25 (KNV)
ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
ವಿಮೋಚನಕಾಂಡ 28 : 26 (KNV)
ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.
ವಿಮೋಚನಕಾಂಡ 28 : 27 (KNV)
ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.
ವಿಮೋಚನಕಾಂಡ 28 : 28 (KNV)
ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
ವಿಮೋಚನಕಾಂಡ 28 : 29 (KNV)
ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
ವಿಮೋಚನಕಾಂಡ 28 : 30 (KNV)
ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
ವಿಮೋಚನಕಾಂಡ 28 : 31 (KNV)
ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
ವಿಮೋಚನಕಾಂಡ 28 : 32 (KNV)
ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
ವಿಮೋಚನಕಾಂಡ 28 : 33 (KNV)
ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
ವಿಮೋಚನಕಾಂಡ 28 : 34 (KNV)
ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
ವಿಮೋಚನಕಾಂಡ 28 : 35 (KNV)
ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
ವಿಮೋಚನಕಾಂಡ 28 : 36 (KNV)
ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
ವಿಮೋಚನಕಾಂಡ 28 : 37 (KNV)
ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
ವಿಮೋಚನಕಾಂಡ 28 : 38 (KNV)
ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ವಿಮೋಚನಕಾಂಡ 28 : 39 (KNV)
ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
ವಿಮೋಚನಕಾಂಡ 28 : 40 (KNV)
ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
ವಿಮೋಚನಕಾಂಡ 28 : 41 (KNV)
ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
ವಿಮೋಚನಕಾಂಡ 28 : 42 (KNV)
ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.
ವಿಮೋಚನಕಾಂಡ 28 : 43 (KNV)
ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43