ವಿಮೋಚನಕಾಂಡ 32 : 1 (KNV)
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
ವಿಮೋಚನಕಾಂಡ 32 : 2 (KNV)
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ವಿಮೋಚನಕಾಂಡ 32 : 3 (KNV)
ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
ವಿಮೋಚನಕಾಂಡ 32 : 4 (KNV)
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ವಿಮೋಚನಕಾಂಡ 32 : 5 (KNV)
ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
ವಿಮೋಚನಕಾಂಡ 32 : 6 (KNV)
ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
ವಿಮೋಚನಕಾಂಡ 32 : 7 (KNV)
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ವಿಮೋಚನಕಾಂಡ 32 : 8 (KNV)
ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ವಿಮೋಚನಕಾಂಡ 32 : 9 (KNV)
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
ವಿಮೋಚನಕಾಂಡ 32 : 10 (KNV)
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ವಿಮೋಚನಕಾಂಡ 32 : 11 (KNV)
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ವಿಮೋಚನಕಾಂಡ 32 : 12 (KNV)
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
ವಿಮೋಚನಕಾಂಡ 32 : 13 (KNV)
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ವಿಮೋಚನಕಾಂಡ 32 : 14 (KNV)
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ವಿಮೋಚನಕಾಂಡ 32 : 15 (KNV)
ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ವಿಮೋಚನಕಾಂಡ 32 : 16 (KNV)
ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
ವಿಮೋಚನಕಾಂಡ 32 : 17 (KNV)
ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
ವಿಮೋಚನಕಾಂಡ 32 : 18 (KNV)
ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
ವಿಮೋಚನಕಾಂಡ 32 : 19 (KNV)
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
ವಿಮೋಚನಕಾಂಡ 32 : 20 (KNV)
ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್‌ ಮಕ್ಕಳು ಕುಡಿಯುವಂತೆ ಮಾಡಿದನು.
ವಿಮೋಚನಕಾಂಡ 32 : 21 (KNV)
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ವಿಮೋಚನಕಾಂಡ 32 : 22 (KNV)
ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
ವಿಮೋಚನಕಾಂಡ 32 : 23 (KNV)
ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
ವಿಮೋಚನಕಾಂಡ 32 : 24 (KNV)
ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
ವಿಮೋಚನಕಾಂಡ 32 : 25 (KNV)
ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
ವಿಮೋಚನಕಾಂಡ 32 : 26 (KNV)
ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
ವಿಮೋಚನಕಾಂಡ 32 : 27 (KNV)
ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
ವಿಮೋಚನಕಾಂಡ 32 : 28 (KNV)
ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
ವಿಮೋಚನಕಾಂಡ 32 : 29 (KNV)
ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
ವಿಮೋಚನಕಾಂಡ 32 : 30 (KNV)
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ವಿಮೋಚನಕಾಂಡ 32 : 31 (KNV)
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ವಿಮೋಚನಕಾಂಡ 32 : 32 (KNV)
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ವಿಮೋಚನಕಾಂಡ 32 : 33 (KNV)
ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
ವಿಮೋಚನಕಾಂಡ 32 : 34 (KNV)
ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
ವಿಮೋಚನಕಾಂಡ 32 : 35 (KNV)
ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: