ಙ್ಞಾನೋಕ್ತಿಗಳು 1 : 1 (KNV)
ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
ಙ್ಞಾನೋಕ್ತಿಗಳು 1 : 2 (KNV)
ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
ಙ್ಞಾನೋಕ್ತಿಗಳು 1 : 3 (KNV)
ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
ಙ್ಞಾನೋಕ್ತಿಗಳು 1 : 4 (KNV)
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
ಙ್ಞಾನೋಕ್ತಿಗಳು 1 : 5 (KNV)
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ಙ್ಞಾನೋಕ್ತಿಗಳು 1 : 6 (KNV)
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
ಙ್ಞಾನೋಕ್ತಿಗಳು 1 : 7 (KNV)
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಙ್ಞಾನೋಕ್ತಿಗಳು 1 : 8 (KNV)
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
ಙ್ಞಾನೋಕ್ತಿಗಳು 1 : 9 (KNV)
ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
ಙ್ಞಾನೋಕ್ತಿಗಳು 1 : 10 (KNV)
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
ಙ್ಞಾನೋಕ್ತಿಗಳು 1 : 11 (KNV)
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ಙ್ಞಾನೋಕ್ತಿಗಳು 1 : 12 (KNV)
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
ಙ್ಞಾನೋಕ್ತಿಗಳು 1 : 13 (KNV)
ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
ಙ್ಞಾನೋಕ್ತಿಗಳು 1 : 14 (KNV)
ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
ಙ್ಞಾನೋಕ್ತಿಗಳು 1 : 15 (KNV)
ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
ಙ್ಞಾನೋಕ್ತಿಗಳು 1 : 16 (KNV)
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
ಙ್ಞಾನೋಕ್ತಿಗಳು 1 : 17 (KNV)
ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
ಙ್ಞಾನೋಕ್ತಿಗಳು 1 : 18 (KNV)
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 1 : 19 (KNV)
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ಙ್ಞಾನೋಕ್ತಿಗಳು 1 : 20 (KNV)
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ಙ್ಞಾನೋಕ್ತಿಗಳು 1 : 21 (KNV)
ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
ಙ್ಞಾನೋಕ್ತಿಗಳು 1 : 22 (KNV)
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಙ್ಞಾನೋಕ್ತಿಗಳು 1 : 23 (KNV)
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಙ್ಞಾನೋಕ್ತಿಗಳು 1 : 24 (KNV)
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಙ್ಞಾನೋಕ್ತಿಗಳು 1 : 25 (KNV)
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ಙ್ಞಾನೋಕ್ತಿಗಳು 1 : 26 (KNV)
ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
ಙ್ಞಾನೋಕ್ತಿಗಳು 1 : 27 (KNV)
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
ಙ್ಞಾನೋಕ್ತಿಗಳು 1 : 28 (KNV)
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ಙ್ಞಾನೋಕ್ತಿಗಳು 1 : 29 (KNV)
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಙ್ಞಾನೋಕ್ತಿಗಳು 1 : 30 (KNV)
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ಙ್ಞಾನೋಕ್ತಿಗಳು 1 : 31 (KNV)
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ಙ್ಞಾನೋಕ್ತಿಗಳು 1 : 32 (KNV)
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಙ್ಞಾನೋಕ್ತಿಗಳು 1 : 33 (KNV)
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: