ಙ್ಞಾನೋಕ್ತಿಗಳು 11 : 1 (KNV)
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ಙ್ಞಾನೋಕ್ತಿಗಳು 11 : 2 (KNV)
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ಙ್ಞಾನೋಕ್ತಿಗಳು 11 : 3 (KNV)
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
ಙ್ಞಾನೋಕ್ತಿಗಳು 11 : 4 (KNV)
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ಙ್ಞಾನೋಕ್ತಿಗಳು 11 : 5 (KNV)
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
ಙ್ಞಾನೋಕ್ತಿಗಳು 11 : 6 (KNV)
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
ಙ್ಞಾನೋಕ್ತಿಗಳು 11 : 7 (KNV)
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
ಙ್ಞಾನೋಕ್ತಿಗಳು 11 : 8 (KNV)
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
ಙ್ಞಾನೋಕ್ತಿಗಳು 11 : 9 (KNV)
ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
ಙ್ಞಾನೋಕ್ತಿಗಳು 11 : 10 (KNV)
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ಙ್ಞಾನೋಕ್ತಿಗಳು 11 : 11 (KNV)
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
ಙ್ಞಾನೋಕ್ತಿಗಳು 11 : 12 (KNV)
ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
ಙ್ಞಾನೋಕ್ತಿಗಳು 11 : 13 (KNV)
ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
ಙ್ಞಾನೋಕ್ತಿಗಳು 11 : 14 (KNV)
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
ಙ್ಞಾನೋಕ್ತಿಗಳು 11 : 15 (KNV)
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
ಙ್ಞಾನೋಕ್ತಿಗಳು 11 : 16 (KNV)
ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 11 : 17 (KNV)
ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 11 : 18 (KNV)
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಙ್ಞಾನೋಕ್ತಿಗಳು 11 : 19 (KNV)
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
ಙ್ಞಾನೋಕ್ತಿಗಳು 11 : 20 (KNV)
ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
ಙ್ಞಾನೋಕ್ತಿಗಳು 11 : 21 (KNV)
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ಙ್ಞಾನೋಕ್ತಿಗಳು 11 : 22 (KNV)
ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
ಙ್ಞಾನೋಕ್ತಿಗಳು 11 : 23 (KNV)
ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
ಙ್ಞಾನೋಕ್ತಿಗಳು 11 : 24 (KNV)
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಙ್ಞಾನೋಕ್ತಿಗಳು 11 : 25 (KNV)
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಙ್ಞಾನೋಕ್ತಿಗಳು 11 : 26 (KNV)
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ಙ್ಞಾನೋಕ್ತಿಗಳು 11 : 27 (KNV)
ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
ಙ್ಞಾನೋಕ್ತಿಗಳು 11 : 28 (KNV)
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
ಙ್ಞಾನೋಕ್ತಿಗಳು 11 : 29 (KNV)
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ಙ್ಞಾನೋಕ್ತಿಗಳು 11 : 30 (KNV)
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಙ್ಞಾನೋಕ್ತಿಗಳು 11 : 31 (KNV)
ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: