ಙ್ಞಾನೋಕ್ತಿಗಳು 15 : 1 (KNV)
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಙ್ಞಾನೋಕ್ತಿಗಳು 15 : 2 (KNV)
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ಙ್ಞಾನೋಕ್ತಿಗಳು 15 : 3 (KNV)
ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
ಙ್ಞಾನೋಕ್ತಿಗಳು 15 : 4 (KNV)
ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
ಙ್ಞಾನೋಕ್ತಿಗಳು 15 : 5 (KNV)
ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
ಙ್ಞಾನೋಕ್ತಿಗಳು 15 : 6 (KNV)
ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
ಙ್ಞಾನೋಕ್ತಿಗಳು 15 : 7 (KNV)
ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
ಙ್ಞಾನೋಕ್ತಿಗಳು 15 : 8 (KNV)
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ಙ್ಞಾನೋಕ್ತಿಗಳು 15 : 9 (KNV)
ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
ಙ್ಞಾನೋಕ್ತಿಗಳು 15 : 10 (KNV)
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಙ್ಞಾನೋಕ್ತಿಗಳು 15 : 11 (KNV)
ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
ಙ್ಞಾನೋಕ್ತಿಗಳು 15 : 12 (KNV)
ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
ಙ್ಞಾನೋಕ್ತಿಗಳು 15 : 13 (KNV)
ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
ಙ್ಞಾನೋಕ್ತಿಗಳು 15 : 14 (KNV)
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ಙ್ಞಾನೋಕ್ತಿಗಳು 15 : 15 (KNV)
ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
ಙ್ಞಾನೋಕ್ತಿಗಳು 15 : 16 (KNV)
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
ಙ್ಞಾನೋಕ್ತಿಗಳು 15 : 17 (KNV)
ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
ಙ್ಞಾನೋಕ್ತಿಗಳು 15 : 18 (KNV)
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ಙ್ಞಾನೋಕ್ತಿಗಳು 15 : 19 (KNV)
ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
ಙ್ಞಾನೋಕ್ತಿಗಳು 15 : 20 (KNV)
ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
ಙ್ಞಾನೋಕ್ತಿಗಳು 15 : 21 (KNV)
ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
ಙ್ಞಾನೋಕ್ತಿಗಳು 15 : 22 (KNV)
ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
ಙ್ಞಾನೋಕ್ತಿಗಳು 15 : 23 (KNV)
ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
ಙ್ಞಾನೋಕ್ತಿಗಳು 15 : 24 (KNV)
ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
ಙ್ಞಾನೋಕ್ತಿಗಳು 15 : 25 (KNV)
ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
ಙ್ಞಾನೋಕ್ತಿಗಳು 15 : 26 (KNV)
ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
ಙ್ಞಾನೋಕ್ತಿಗಳು 15 : 27 (KNV)
ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
ಙ್ಞಾನೋಕ್ತಿಗಳು 15 : 28 (KNV)
ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
ಙ್ಞಾನೋಕ್ತಿಗಳು 15 : 29 (KNV)
ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
ಙ್ಞಾನೋಕ್ತಿಗಳು 15 : 30 (KNV)
ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
ಙ್ಞಾನೋಕ್ತಿಗಳು 15 : 31 (KNV)
ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
ಙ್ಞಾನೋಕ್ತಿಗಳು 15 : 32 (KNV)
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.
ಙ್ಞಾನೋಕ್ತಿಗಳು 15 : 33 (KNV)
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
❮
❯