ಙ್ಞಾನೋಕ್ತಿಗಳು 25 : 1 (KNV)
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
ಙ್ಞಾನೋಕ್ತಿಗಳು 25 : 2 (KNV)
ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
ಙ್ಞಾನೋಕ್ತಿಗಳು 25 : 3 (KNV)
ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
ಙ್ಞಾನೋಕ್ತಿಗಳು 25 : 4 (KNV)
ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
ಙ್ಞಾನೋಕ್ತಿಗಳು 25 : 5 (KNV)
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
ಙ್ಞಾನೋಕ್ತಿಗಳು 25 : 6 (KNV)
ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
ಙ್ಞಾನೋಕ್ತಿಗಳು 25 : 7 (KNV)
ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
ಙ್ಞಾನೋಕ್ತಿಗಳು 25 : 8 (KNV)
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಙ್ಞಾನೋಕ್ತಿಗಳು 25 : 9 (KNV)
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
ಙ್ಞಾನೋಕ್ತಿಗಳು 25 : 10 (KNV)
ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
ಙ್ಞಾನೋಕ್ತಿಗಳು 25 : 11 (KNV)
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಙ್ಞಾನೋಕ್ತಿಗಳು 25 : 12 (KNV)
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ಙ್ಞಾನೋಕ್ತಿಗಳು 25 : 13 (KNV)
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ಙ್ಞಾನೋಕ್ತಿಗಳು 25 : 14 (KNV)
ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
ಙ್ಞಾನೋಕ್ತಿಗಳು 25 : 15 (KNV)
ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
ಙ್ಞಾನೋಕ್ತಿಗಳು 25 : 16 (KNV)
ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
ಙ್ಞಾನೋಕ್ತಿಗಳು 25 : 17 (KNV)
ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
ಙ್ಞಾನೋಕ್ತಿಗಳು 25 : 18 (KNV)
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
ಙ್ಞಾನೋಕ್ತಿಗಳು 25 : 19 (KNV)
ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
ಙ್ಞಾನೋಕ್ತಿಗಳು 25 : 20 (KNV)
ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
ಙ್ಞಾನೋಕ್ತಿಗಳು 25 : 21 (KNV)
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಙ್ಞಾನೋಕ್ತಿಗಳು 25 : 22 (KNV)
ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
ಙ್ಞಾನೋಕ್ತಿಗಳು 25 : 23 (KNV)
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ಙ್ಞಾನೋಕ್ತಿಗಳು 25 : 24 (KNV)
ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
ಙ್ಞಾನೋಕ್ತಿಗಳು 25 : 25 (KNV)
ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
ಙ್ಞಾನೋಕ್ತಿಗಳು 25 : 26 (KNV)
ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
ಙ್ಞಾನೋಕ್ತಿಗಳು 25 : 27 (KNV)
ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.
ಙ್ಞಾನೋಕ್ತಿಗಳು 25 : 28 (KNV)
ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
❮
❯