ಙ್ಞಾನೋಕ್ತಿಗಳು 3 : 1 (KNV)
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ಙ್ಞಾನೋಕ್ತಿಗಳು 3 : 2 (KNV)
ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
ಙ್ಞಾನೋಕ್ತಿಗಳು 3 : 3 (KNV)
ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ಙ್ಞಾನೋಕ್ತಿಗಳು 3 : 4 (KNV)
ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
ಙ್ಞಾನೋಕ್ತಿಗಳು 3 : 5 (KNV)
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಙ್ಞಾನೋಕ್ತಿಗಳು 3 : 6 (KNV)
ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಙ್ಞಾನೋಕ್ತಿಗಳು 3 : 7 (KNV)
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ಙ್ಞಾನೋಕ್ತಿಗಳು 3 : 8 (KNV)
ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
ಙ್ಞಾನೋಕ್ತಿಗಳು 3 : 9 (KNV)
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಙ್ಞಾನೋಕ್ತಿಗಳು 3 : 10 (KNV)
ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
ಙ್ಞಾನೋಕ್ತಿಗಳು 3 : 11 (KNV)
ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
ಙ್ಞಾನೋಕ್ತಿಗಳು 3 : 12 (KNV)
ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
ಙ್ಞಾನೋಕ್ತಿಗಳು 3 : 13 (KNV)
ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
ಙ್ಞಾನೋಕ್ತಿಗಳು 3 : 14 (KNV)
ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
ಙ್ಞಾನೋಕ್ತಿಗಳು 3 : 15 (KNV)
ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ಙ್ಞಾನೋಕ್ತಿಗಳು 3 : 16 (KNV)
ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
ಙ್ಞಾನೋಕ್ತಿಗಳು 3 : 17 (KNV)
ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
ಙ್ಞಾನೋಕ್ತಿಗಳು 3 : 18 (KNV)
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ಙ್ಞಾನೋಕ್ತಿಗಳು 3 : 19 (KNV)
ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
ಙ್ಞಾನೋಕ್ತಿಗಳು 3 : 20 (KNV)
ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
ಙ್ಞಾನೋಕ್ತಿಗಳು 3 : 21 (KNV)
ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
ಙ್ಞಾನೋಕ್ತಿಗಳು 3 : 22 (KNV)
ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
ಙ್ಞಾನೋಕ್ತಿಗಳು 3 : 23 (KNV)
ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
ಙ್ಞಾನೋಕ್ತಿಗಳು 3 : 24 (KNV)
ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
ಙ್ಞಾನೋಕ್ತಿಗಳು 3 : 25 (KNV)
ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
ಙ್ಞಾನೋಕ್ತಿಗಳು 3 : 26 (KNV)
ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
ಙ್ಞಾನೋಕ್ತಿಗಳು 3 : 27 (KNV)
ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
ಙ್ಞಾನೋಕ್ತಿಗಳು 3 : 28 (KNV)
ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
ಙ್ಞಾನೋಕ್ತಿಗಳು 3 : 29 (KNV)
ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
ಙ್ಞಾನೋಕ್ತಿಗಳು 3 : 30 (KNV)
ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
ಙ್ಞಾನೋಕ್ತಿಗಳು 3 : 31 (KNV)
ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
ಙ್ಞಾನೋಕ್ತಿಗಳು 3 : 32 (KNV)
ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
ಙ್ಞಾನೋಕ್ತಿಗಳು 3 : 33 (KNV)
ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
ಙ್ಞಾನೋಕ್ತಿಗಳು 3 : 34 (KNV)
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
ಙ್ಞಾನೋಕ್ತಿಗಳು 3 : 35 (KNV)
ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
❮
❯