ಙ್ಞಾನೋಕ್ತಿಗಳು 5 : 1 (KNV)
ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
ಙ್ಞಾನೋಕ್ತಿಗಳು 5 : 2 (KNV)
ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
ಙ್ಞಾನೋಕ್ತಿಗಳು 5 : 3 (KNV)
ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
ಙ್ಞಾನೋಕ್ತಿಗಳು 5 : 4 (KNV)
ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
ಙ್ಞಾನೋಕ್ತಿಗಳು 5 : 5 (KNV)
ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
ಙ್ಞಾನೋಕ್ತಿಗಳು 5 : 6 (KNV)
ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
ಙ್ಞಾನೋಕ್ತಿಗಳು 5 : 7 (KNV)
ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
ಙ್ಞಾನೋಕ್ತಿಗಳು 5 : 8 (KNV)
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
ಙ್ಞಾನೋಕ್ತಿಗಳು 5 : 9 (KNV)
ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ.
ಙ್ಞಾನೋಕ್ತಿಗಳು 5 : 10 (KNV)
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
ಙ್ಞಾನೋಕ್ತಿಗಳು 5 : 11 (KNV)
ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
ಙ್ಞಾನೋಕ್ತಿಗಳು 5 : 12 (KNV)
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಙ್ಞಾನೋಕ್ತಿಗಳು 5 : 13 (KNV)
ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
ಙ್ಞಾನೋಕ್ತಿಗಳು 5 : 14 (KNV)
ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
ಙ್ಞಾನೋಕ್ತಿಗಳು 5 : 15 (KNV)
ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ಙ್ಞಾನೋಕ್ತಿಗಳು 5 : 16 (KNV)
ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
ಙ್ಞಾನೋಕ್ತಿಗಳು 5 : 17 (KNV)
ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
ಙ್ಞಾನೋಕ್ತಿಗಳು 5 : 18 (KNV)
ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
ಙ್ಞಾನೋಕ್ತಿಗಳು 5 : 19 (KNV)
ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
ಙ್ಞಾನೋಕ್ತಿಗಳು 5 : 20 (KNV)
ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
ಙ್ಞಾನೋಕ್ತಿಗಳು 5 : 21 (KNV)
ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
ಙ್ಞಾನೋಕ್ತಿಗಳು 5 : 22 (KNV)
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.
ಙ್ಞಾನೋಕ್ತಿಗಳು 5 : 23 (KNV)
ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
❮
❯