ಙ್ಞಾನೋಕ್ತಿಗಳು 6 : 1 (KNV)
ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
ಙ್ಞಾನೋಕ್ತಿಗಳು 6 : 2 (KNV)
ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
ಙ್ಞಾನೋಕ್ತಿಗಳು 6 : 3 (KNV)
ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
ಙ್ಞಾನೋಕ್ತಿಗಳು 6 : 4 (KNV)
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಙ್ಞಾನೋಕ್ತಿಗಳು 6 : 5 (KNV)
ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
ಙ್ಞಾನೋಕ್ತಿಗಳು 6 : 6 (KNV)
ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
ಙ್ಞಾನೋಕ್ತಿಗಳು 6 : 7 (KNV)
ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ
ಙ್ಞಾನೋಕ್ತಿಗಳು 6 : 8 (KNV)
ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
ಙ್ಞಾನೋಕ್ತಿಗಳು 6 : 9 (KNV)
ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
ಙ್ಞಾನೋಕ್ತಿಗಳು 6 : 10 (KNV)
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
ಙ್ಞಾನೋಕ್ತಿಗಳು 6 : 11 (KNV)
ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
ಙ್ಞಾನೋಕ್ತಿಗಳು 6 : 12 (KNV)
ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
ಙ್ಞಾನೋಕ್ತಿಗಳು 6 : 13 (KNV)
ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
ಙ್ಞಾನೋಕ್ತಿಗಳು 6 : 14 (KNV)
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಙ್ಞಾನೋಕ್ತಿಗಳು 6 : 15 (KNV)
ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
ಙ್ಞಾನೋಕ್ತಿಗಳು 6 : 16 (KNV)
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ಙ್ಞಾನೋಕ್ತಿಗಳು 6 : 17 (KNV)
ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
ಙ್ಞಾನೋಕ್ತಿಗಳು 6 : 18 (KNV)
ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
ಙ್ಞಾನೋಕ್ತಿಗಳು 6 : 19 (KNV)
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಙ್ಞಾನೋಕ್ತಿಗಳು 6 : 20 (KNV)
ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
ಙ್ಞಾನೋಕ್ತಿಗಳು 6 : 21 (KNV)
ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
ಙ್ಞಾನೋಕ್ತಿಗಳು 6 : 22 (KNV)
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
ಙ್ಞಾನೋಕ್ತಿಗಳು 6 : 23 (KNV)
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಙ್ಞಾನೋಕ್ತಿಗಳು 6 : 24 (KNV)
ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
ಙ್ಞಾನೋಕ್ತಿಗಳು 6 : 25 (KNV)
ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
ಙ್ಞಾನೋಕ್ತಿಗಳು 6 : 26 (KNV)
ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
ಙ್ಞಾನೋಕ್ತಿಗಳು 6 : 27 (KNV)
ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
ಙ್ಞಾನೋಕ್ತಿಗಳು 6 : 28 (KNV)
ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
ಙ್ಞಾನೋಕ್ತಿಗಳು 6 : 29 (KNV)
ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
ಙ್ಞಾನೋಕ್ತಿಗಳು 6 : 30 (KNV)
ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
ಙ್ಞಾನೋಕ್ತಿಗಳು 6 : 31 (KNV)
ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
ಙ್ಞಾನೋಕ್ತಿಗಳು 6 : 32 (KNV)
ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
ಙ್ಞಾನೋಕ್ತಿಗಳು 6 : 33 (KNV)
ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
ಙ್ಞಾನೋಕ್ತಿಗಳು 6 : 34 (KNV)
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ಙ್ಞಾನೋಕ್ತಿಗಳು 6 : 35 (KNV)
ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: