ಙ್ಞಾನೋಕ್ತಿಗಳು 8 : 1 (KNV)
ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
ಙ್ಞಾನೋಕ್ತಿಗಳು 8 : 2 (KNV)
ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
ಙ್ಞಾನೋಕ್ತಿಗಳು 8 : 3 (KNV)
ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
ಙ್ಞಾನೋಕ್ತಿಗಳು 8 : 4 (KNV)
ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
ಙ್ಞಾನೋಕ್ತಿಗಳು 8 : 5 (KNV)
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಙ್ಞಾನೋಕ್ತಿಗಳು 8 : 6 (KNV)
ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
ಙ್ಞಾನೋಕ್ತಿಗಳು 8 : 7 (KNV)
ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
ಙ್ಞಾನೋಕ್ತಿಗಳು 8 : 8 (KNV)
ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
ಙ್ಞಾನೋಕ್ತಿಗಳು 8 : 9 (KNV)
ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
ಙ್ಞಾನೋಕ್ತಿಗಳು 8 : 10 (KNV)
ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
ಙ್ಞಾನೋಕ್ತಿಗಳು 8 : 11 (KNV)
ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
ಙ್ಞಾನೋಕ್ತಿಗಳು 8 : 12 (KNV)
ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
ಙ್ಞಾನೋಕ್ತಿಗಳು 8 : 13 (KNV)
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಙ್ಞಾನೋಕ್ತಿಗಳು 8 : 14 (KNV)
ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
ಙ್ಞಾನೋಕ್ತಿಗಳು 8 : 15 (KNV)
ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ಙ್ಞಾನೋಕ್ತಿಗಳು 8 : 16 (KNV)
ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
ಙ್ಞಾನೋಕ್ತಿಗಳು 8 : 17 (KNV)
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಙ್ಞಾನೋಕ್ತಿಗಳು 8 : 18 (KNV)
ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
ಙ್ಞಾನೋಕ್ತಿಗಳು 8 : 19 (KNV)
ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
ಙ್ಞಾನೋಕ್ತಿಗಳು 8 : 20 (KNV)
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ಙ್ಞಾನೋಕ್ತಿಗಳು 8 : 21 (KNV)
ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
ಙ್ಞಾನೋಕ್ತಿಗಳು 8 : 22 (KNV)
ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
ಙ್ಞಾನೋಕ್ತಿಗಳು 8 : 23 (KNV)
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
ಙ್ಞಾನೋಕ್ತಿಗಳು 8 : 24 (KNV)
ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
ಙ್ಞಾನೋಕ್ತಿಗಳು 8 : 25 (KNV)
ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
ಙ್ಞಾನೋಕ್ತಿಗಳು 8 : 26 (KNV)
ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
ಙ್ಞಾನೋಕ್ತಿಗಳು 8 : 27 (KNV)
ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
ಙ್ಞಾನೋಕ್ತಿಗಳು 8 : 28 (KNV)
ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
ಙ್ಞಾನೋಕ್ತಿಗಳು 8 : 29 (KNV)
ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
ಙ್ಞಾನೋಕ್ತಿಗಳು 8 : 30 (KNV)
ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
ಙ್ಞಾನೋಕ್ತಿಗಳು 8 : 31 (KNV)
ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
ಙ್ಞಾನೋಕ್ತಿಗಳು 8 : 32 (KNV)
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಙ್ಞಾನೋಕ್ತಿಗಳು 8 : 33 (KNV)
ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
ಙ್ಞಾನೋಕ್ತಿಗಳು 8 : 34 (KNV)
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ಙ್ಞಾನೋಕ್ತಿಗಳು 8 : 35 (KNV)
ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಙ್ಞಾನೋಕ್ತಿಗಳು 8 : 36 (KNV)
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: