ಪ್ರಸಂಗಿ 2 : 1 (KNV)
ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
ಪ್ರಸಂಗಿ 2 : 2 (KNV)
ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು.
ಪ್ರಸಂಗಿ 2 : 3 (KNV)
ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
ಪ್ರಸಂಗಿ 2 : 4 (KNV)
ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
ಪ್ರಸಂಗಿ 2 : 5 (KNV)
ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
ಪ್ರಸಂಗಿ 2 : 6 (KNV)
ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
ಪ್ರಸಂಗಿ 2 : 7 (KNV)
ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
ಪ್ರಸಂಗಿ 2 : 8 (KNV)
ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
ಪ್ರಸಂಗಿ 2 : 9 (KNV)
ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
ಪ್ರಸಂಗಿ 2 : 10 (KNV)
ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ಪ್ರಸಂಗಿ 2 : 11 (KNV)
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಪ್ರಸಂಗಿ 2 : 12 (KNV)
ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
ಪ್ರಸಂಗಿ 2 : 13 (KNV)
ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
ಪ್ರಸಂಗಿ 2 : 14 (KNV)
ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
ಪ್ರಸಂಗಿ 2 : 15 (KNV)
ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
ಪ್ರಸಂಗಿ 2 : 16 (KNV)
ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
ಪ್ರಸಂಗಿ 2 : 17 (KNV)
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ಪ್ರಸಂಗಿ 2 : 18 (KNV)
ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
ಪ್ರಸಂಗಿ 2 : 19 (KNV)
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ಪ್ರಸಂಗಿ 2 : 20 (KNV)
ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
ಪ್ರಸಂಗಿ 2 : 21 (KNV)
ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
ಪ್ರಸಂಗಿ 2 : 22 (KNV)
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಪ್ರಸಂಗಿ 2 : 23 (KNV)
ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
ಪ್ರಸಂಗಿ 2 : 24 (KNV)
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
ಪ್ರಸಂಗಿ 2 : 25 (KNV)
ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?
ಪ್ರಸಂಗಿ 2 : 26 (KNV)
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
❮
❯