ಪರಮ ಗೀತ 6 : 1 (KNV)
ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
ಪರಮ ಗೀತ 6 : 2 (KNV)
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ಪರಮ ಗೀತ 6 : 3 (KNV)
ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
ಪರಮ ಗೀತ 6 : 4 (KNV)
ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
ಪರಮ ಗೀತ 6 : 5 (KNV)
ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.
ಪರಮ ಗೀತ 6 : 6 (KNV)
ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
ಪರಮ ಗೀತ 6 : 7 (KNV)
ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
ಪರಮ ಗೀತ 6 : 8 (KNV)
ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
ಪರಮ ಗೀತ 6 : 9 (KNV)
ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
ಪರಮ ಗೀತ 6 : 10 (KNV)
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
ಪರಮ ಗೀತ 6 : 11 (KNV)
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
ಪರಮ ಗೀತ 6 : 12 (KNV)
ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
ಪರಮ ಗೀತ 6 : 13 (KNV)
ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?

1 2 3 4 5 6 7 8 9 10 11 12 13

BG:

Opacity:

Color:


Size:


Font: