ಪರಮ ಗೀತ 7 : 1 (KNV)
ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
ಪರಮ ಗೀತ 7 : 2 (KNV)
ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
ಪರಮ ಗೀತ 7 : 3 (KNV)
ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
ಪರಮ ಗೀತ 7 : 4 (KNV)
ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
ಪರಮ ಗೀತ 7 : 5 (KNV)
ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
ಪರಮ ಗೀತ 7 : 6 (KNV)
ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
ಪರಮ ಗೀತ 7 : 7 (KNV)
ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
ಪರಮ ಗೀತ 7 : 8 (KNV)
ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
ಪರಮ ಗೀತ 7 : 9 (KNV)
ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
ಪರಮ ಗೀತ 7 : 10 (KNV)
ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
ಪರಮ ಗೀತ 7 : 11 (KNV)
ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.
ಪರಮ ಗೀತ 7 : 12 (KNV)
ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.
ಪರಮ ಗೀತ 7 : 13 (KNV)
ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.

1 2 3 4 5 6 7 8 9 10 11 12 13