ಯೆಶಾಯ 10 : 1 (KNV)
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಯೆಶಾಯ 10 : 2 (KNV)
ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ಯೆಶಾಯ 10 : 3 (KNV)
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ಯೆಶಾಯ 10 : 4 (KNV)
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಯೆಶಾಯ 10 : 5 (KNV)
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಯೆಶಾಯ 10 : 6 (KNV)
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಯೆಶಾಯ 10 : 7 (KNV)
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ಯೆಶಾಯ 10 : 8 (KNV)
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ಯೆಶಾಯ 10 : 9 (KNV)
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಯೆಶಾಯ 10 : 10 (KNV)
ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
ಯೆಶಾಯ 10 : 11 (KNV)
ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
ಯೆಶಾಯ 10 : 12 (KNV)
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಯೆಶಾಯ 10 : 13 (KNV)
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಯೆಶಾಯ 10 : 14 (KNV)
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ಯೆಶಾಯ 10 : 15 (KNV)
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಯೆಶಾಯ 10 : 16 (KNV)
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಯೆಶಾಯ 10 : 17 (KNV)
ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
ಯೆಶಾಯ 10 : 18 (KNV)
ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ಯೆಶಾಯ 10 : 19 (KNV)
ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
ಯೆಶಾಯ 10 : 20 (KNV)
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಯೆಶಾಯ 10 : 21 (KNV)
ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
ಯೆಶಾಯ 10 : 22 (KNV)
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ಯೆಶಾಯ 10 : 23 (KNV)
ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
ಯೆಶಾಯ 10 : 24 (KNV)
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಯೆಶಾಯ 10 : 25 (KNV)
ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
ಯೆಶಾಯ 10 : 26 (KNV)
ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
ಯೆಶಾಯ 10 : 27 (KNV)
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
ಯೆಶಾಯ 10 : 28 (KNV)
ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
ಯೆಶಾಯ 10 : 29 (KNV)
ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
ಯೆಶಾಯ 10 : 30 (KNV)
ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
ಯೆಶಾಯ 10 : 31 (KNV)
ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
ಯೆಶಾಯ 10 : 32 (KNV)
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
ಯೆಶಾಯ 10 : 33 (KNV)
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.
ಯೆಶಾಯ 10 : 34 (KNV)
ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34