ಯೆಶಾಯ 13 : 1 (KNV)
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಯೆಶಾಯ 13 : 2 (KNV)
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ಯೆಶಾಯ 13 : 3 (KNV)
ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
ಯೆಶಾಯ 13 : 4 (KNV)
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ಯೆಶಾಯ 13 : 5 (KNV)
ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
ಯೆಶಾಯ 13 : 6 (KNV)
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ಯೆಶಾಯ 13 : 7 (KNV)
ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
ಯೆಶಾಯ 13 : 8 (KNV)
ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
ಯೆಶಾಯ 13 : 9 (KNV)
ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
ಯೆಶಾಯ 13 : 10 (KNV)
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ಯೆಶಾಯ 13 : 11 (KNV)
ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
ಯೆಶಾಯ 13 : 12 (KNV)
ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
ಯೆಶಾಯ 13 : 13 (KNV)
ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
ಯೆಶಾಯ 13 : 14 (KNV)
ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
ಯೆಶಾಯ 13 : 15 (KNV)
ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
ಯೆಶಾಯ 13 : 16 (KNV)
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
ಯೆಶಾಯ 13 : 17 (KNV)
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಯೆಶಾಯ 13 : 18 (KNV)
ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
ಯೆಶಾಯ 13 : 19 (KNV)
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ಯೆಶಾಯ 13 : 20 (KNV)
ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
ಯೆಶಾಯ 13 : 21 (KNV)
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಯೆಶಾಯ 13 : 22 (KNV)
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: