ಯೆಶಾಯ 2 : 1 (KNV)
ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
ಯೆಶಾಯ 2 : 2 (KNV)
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಯೆಶಾಯ 2 : 3 (KNV)
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಯೆಶಾಯ 2 : 4 (KNV)
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಯೆಶಾಯ 2 : 5 (KNV)
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
ಯೆಶಾಯ 2 : 6 (KNV)
ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
ಯೆಶಾಯ 2 : 7 (KNV)
ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
ಯೆಶಾಯ 2 : 8 (KNV)
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಯೆಶಾಯ 2 : 9 (KNV)
ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
ಯೆಶಾಯ 2 : 10 (KNV)
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಯೆಶಾಯ 2 : 11 (KNV)
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಯೆಶಾಯ 2 : 12 (KNV)
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಯೆಶಾಯ 2 : 13 (KNV)
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
ಯೆಶಾಯ 2 : 14 (KNV)
ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
ಯೆಶಾಯ 2 : 15 (KNV)
ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
ಯೆಶಾಯ 2 : 16 (KNV)
ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
ಯೆಶಾಯ 2 : 17 (KNV)
ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
ಯೆಶಾಯ 2 : 18 (KNV)
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಯೆಶಾಯ 2 : 19 (KNV)
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಯೆಶಾಯ 2 : 20 (KNV)
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಯೆಶಾಯ 2 : 21 (KNV)
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.
ಯೆಶಾಯ 2 : 22 (KNV)
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

1 2 3 4 5 6 7 8 9 10 11 12 13 14 15 16 17 18 19 20 21 22