ಯೆಶಾಯ 22 : 1 (KNV)
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
ಯೆಶಾಯ 22 : 2 (KNV)
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
ಯೆಶಾಯ 22 : 3 (KNV)
ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
ಯೆಶಾಯ 22 : 4 (KNV)
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ಯೆಶಾಯ 22 : 5 (KNV)
ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
ಯೆಶಾಯ 22 : 6 (KNV)
ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
ಯೆಶಾಯ 22 : 7 (KNV)
ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
ಯೆಶಾಯ 22 : 8 (KNV)
ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
ಯೆಶಾಯ 22 : 9 (KNV)
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
ಯೆಶಾಯ 22 : 10 (KNV)
ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
ಯೆಶಾಯ 22 : 11 (KNV)
ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
ಯೆಶಾಯ 22 : 12 (KNV)
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಯೆಶಾಯ 22 : 13 (KNV)
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ಯೆಶಾಯ 22 : 14 (KNV)
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
ಯೆಶಾಯ 22 : 15 (KNV)
ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
ಯೆಶಾಯ 22 : 16 (KNV)
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
ಯೆಶಾಯ 22 : 17 (KNV)
ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
ಯೆಶಾಯ 22 : 18 (KNV)
ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
ಯೆಶಾಯ 22 : 19 (KNV)
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
ಯೆಶಾಯ 22 : 20 (KNV)
ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
ಯೆಶಾಯ 22 : 21 (KNV)
ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
ಯೆಶಾಯ 22 : 22 (KNV)
ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
ಯೆಶಾಯ 22 : 23 (KNV)
ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
ಯೆಶಾಯ 22 : 24 (KNV)
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.
ಯೆಶಾಯ 22 : 25 (KNV)
ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
❮
❯