ಯೆಶಾಯ 3 : 1 (KNV)
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
ಯೆಶಾಯ 3 : 2 (KNV)
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
ಯೆಶಾಯ 3 : 3 (KNV)
ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
ಯೆಶಾಯ 3 : 4 (KNV)
ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
ಯೆಶಾಯ 3 : 5 (KNV)
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಯೆಶಾಯ 3 : 6 (KNV)
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
ಯೆಶಾಯ 3 : 7 (KNV)
ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
ಯೆಶಾಯ 3 : 8 (KNV)
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ಯೆಶಾಯ 3 : 9 (KNV)
ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ಯೆಶಾಯ 3 : 10 (KNV)
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಯೆಶಾಯ 3 : 11 (KNV)
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ಯೆಶಾಯ 3 : 12 (KNV)
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ಯೆಶಾಯ 3 : 13 (KNV)
ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
ಯೆಶಾಯ 3 : 14 (KNV)
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಯೆಶಾಯ 3 : 15 (KNV)
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಯೆಶಾಯ 3 : 16 (KNV)
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್‌ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
ಯೆಶಾಯ 3 : 17 (KNV)
ಚೀಯೋನ್‌ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
ಯೆಶಾಯ 3 : 18 (KNV)
ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
ಯೆಶಾಯ 3 : 19 (KNV)
ಸರ, ಬಳೆ, ಮುಂಡಾಸ,
ಯೆಶಾಯ 3 : 20 (KNV)
ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ,
ಯೆಶಾಯ 3 : 21 (KNV)
ಓಲೆ, ಉಂಗುರ, ಮೂಗುತಿ,
ಯೆಶಾಯ 3 : 22 (KNV)
ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ,
ಯೆಶಾಯ 3 : 23 (KNV)
ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
ಯೆಶಾಯ 3 : 24 (KNV)
ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
ಯೆಶಾಯ 3 : 25 (KNV)
ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ಯೆಶಾಯ 3 : 26 (KNV)
ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: