ಯೆಶಾಯ 36 : 1 (KNV)
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಯೆಶಾಯ 36 : 2 (KNV)
ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
ಯೆಶಾಯ 36 : 3 (KNV)
ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
ಯೆಶಾಯ 36 : 4 (KNV)
ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
ಯೆಶಾಯ 36 : 5 (KNV)
ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
ಯೆಶಾಯ 36 : 6 (KNV)
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ಯೆಶಾಯ 36 : 7 (KNV)
ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
ಯೆಶಾಯ 36 : 8 (KNV)
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
ಯೆಶಾಯ 36 : 9 (KNV)
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ಯೆಶಾಯ 36 : 10 (KNV)
ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
ಯೆಶಾಯ 36 : 11 (KNV)
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
ಯೆಶಾಯ 36 : 12 (KNV)
ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
ಯೆಶಾಯ 36 : 13 (KNV)
ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
ಯೆಶಾಯ 36 : 14 (KNV)
ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
ಯೆಶಾಯ 36 : 15 (KNV)
ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
ಯೆಶಾಯ 36 : 16 (KNV)
ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
ಯೆಶಾಯ 36 : 17 (KNV)
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
ಯೆಶಾಯ 36 : 18 (KNV)
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
ಯೆಶಾಯ 36 : 19 (KNV)
ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
ಯೆಶಾಯ 36 : 20 (KNV)
ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
ಯೆಶಾಯ 36 : 21 (KNV)
ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
ಯೆಶಾಯ 36 : 22 (KNV)
ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22