ಯೆಶಾಯ 48 : 1 (KNV)
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಯೆಶಾಯ 48 : 2 (KNV)
ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ಯೆಶಾಯ 48 : 3 (KNV)
ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ಯೆಶಾಯ 48 : 4 (KNV)
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ಯೆಶಾಯ 48 : 5 (KNV)
ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
ಯೆಶಾಯ 48 : 6 (KNV)
ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
ಯೆಶಾಯ 48 : 7 (KNV)
ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
ಯೆಶಾಯ 48 : 8 (KNV)
ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
ಯೆಶಾಯ 48 : 9 (KNV)
ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
ಯೆಶಾಯ 48 : 10 (KNV)
ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
ಯೆಶಾಯ 48 : 11 (KNV)
ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.
ಯೆಶಾಯ 48 : 12 (KNV)
ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
ಯೆಶಾಯ 48 : 13 (KNV)
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಯೆಶಾಯ 48 : 14 (KNV)
ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ಯೆಶಾಯ 48 : 15 (KNV)
ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
ಯೆಶಾಯ 48 : 16 (KNV)
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ಯೆಶಾಯ 48 : 17 (KNV)
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ಯೆಶಾಯ 48 : 18 (KNV)
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ಯೆಶಾಯ 48 : 19 (KNV)
ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
ಯೆಶಾಯ 48 : 20 (KNV)
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
ಯೆಶಾಯ 48 : 21 (KNV)
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಯೆಶಾಯ 48 : 22 (KNV)
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: