ಯೆಶಾಯ 59 : 1 (KNV)
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಯೆಶಾಯ 59 : 2 (KNV)
ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ಯೆಶಾಯ 59 : 3 (KNV)
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ಯೆಶಾಯ 59 : 4 (KNV)
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ಯೆಶಾಯ 59 : 5 (KNV)
ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
ಯೆಶಾಯ 59 : 6 (KNV)
ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
ಯೆಶಾಯ 59 : 7 (KNV)
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ಯೆಶಾಯ 59 : 8 (KNV)
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ಯೆಶಾಯ 59 : 9 (KNV)
ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
ಯೆಶಾಯ 59 : 10 (KNV)
ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
ಯೆಶಾಯ 59 : 11 (KNV)
ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
ಯೆಶಾಯ 59 : 12 (KNV)
ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
ಯೆಶಾಯ 59 : 13 (KNV)
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಯೆಶಾಯ 59 : 14 (KNV)
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
ಯೆಶಾಯ 59 : 15 (KNV)
ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ಯೆಶಾಯ 59 : 16 (KNV)
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಯೆಶಾಯ 59 : 17 (KNV)
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಯೆಶಾಯ 59 : 18 (KNV)
ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
ಯೆಶಾಯ 59 : 19 (KNV)
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಯೆಶಾಯ 59 : 20 (KNV)
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.
ಯೆಶಾಯ 59 : 21 (KNV)
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21