ಯೆರೆಮಿಯ 1 : 1 (KNV)
ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
ಯೆರೆಮಿಯ 1 : 2 (KNV)
ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
ಯೆರೆಮಿಯ 1 : 3 (KNV)
ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
ಯೆರೆಮಿಯ 1 : 4 (KNV)
ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ
ಯೆರೆಮಿಯ 1 : 5 (KNV)
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ಯೆರೆಮಿಯ 1 : 6 (KNV)
ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
ಯೆರೆಮಿಯ 1 : 7 (KNV)
ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
ಯೆರೆಮಿಯ 1 : 8 (KNV)
ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ಯೆರೆಮಿಯ 1 : 9 (KNV)
ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ಯೆರೆಮಿಯ 1 : 10 (KNV)
ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
ಯೆರೆಮಿಯ 1 : 11 (KNV)
ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
ಯೆರೆಮಿಯ 1 : 12 (KNV)
ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
ಯೆರೆಮಿಯ 1 : 13 (KNV)
ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
ಯೆರೆಮಿಯ 1 : 14 (KNV)
ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
ಯೆರೆಮಿಯ 1 : 15 (KNV)
ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
ಯೆರೆಮಿಯ 1 : 16 (KNV)
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಯೆರೆಮಿಯ 1 : 17 (KNV)
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಯೆರೆಮಿಯ 1 : 18 (KNV)
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.
ಯೆರೆಮಿಯ 1 : 19 (KNV)
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
❮
❯