ಯೆರೆಮಿಯ 10 : 1 (KNV)
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
ಯೆರೆಮಿಯ 10 : 2 (KNV)
ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
ಯೆರೆಮಿಯ 10 : 3 (KNV)
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಯೆರೆಮಿಯ 10 : 4 (KNV)
ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
ಯೆರೆಮಿಯ 10 : 5 (KNV)
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಯೆರೆಮಿಯ 10 : 6 (KNV)
ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
ಯೆರೆಮಿಯ 10 : 7 (KNV)
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
ಯೆರೆಮಿಯ 10 : 8 (KNV)
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಯೆರೆಮಿಯ 10 : 9 (KNV)
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ಯೆರೆಮಿಯ 10 : 10 (KNV)
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಯೆರೆಮಿಯ 10 : 11 (KNV)
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಯೆರೆಮಿಯ 10 : 12 (KNV)
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ಯೆರೆಮಿಯ 10 : 13 (KNV)
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
ಯೆರೆಮಿಯ 10 : 14 (KNV)
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಯೆರೆಮಿಯ 10 : 15 (KNV)
ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
ಯೆರೆಮಿಯ 10 : 16 (KNV)
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಯೆರೆಮಿಯ 10 : 17 (KNV)
ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
ಯೆರೆಮಿಯ 10 : 18 (KNV)
ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
ಯೆರೆಮಿಯ 10 : 19 (KNV)
ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
ಯೆರೆಮಿಯ 10 : 20 (KNV)
ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
ಯೆರೆಮಿಯ 10 : 21 (KNV)
ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
ಯೆರೆಮಿಯ 10 : 22 (KNV)
ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ಯೆರೆಮಿಯ 10 : 23 (KNV)
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: