ಯೆರೆಮಿಯ 18 : 1 (KNV)
ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
ಯೆರೆಮಿಯ 18 : 2 (KNV)
ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
ಯೆರೆಮಿಯ 18 : 3 (KNV)
ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
ಯೆರೆಮಿಯ 18 : 4 (KNV)
ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
ಯೆರೆಮಿಯ 18 : 5 (KNV)
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಯೆರೆಮಿಯ 18 : 6 (KNV)
ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
ಯೆರೆಮಿಯ 18 : 7 (KNV)
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಯೆರೆಮಿಯ 18 : 8 (KNV)
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
ಯೆರೆಮಿಯ 18 : 9 (KNV)
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯೆರೆಮಿಯ 18 : 10 (KNV)
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಯೆರೆಮಿಯ 18 : 11 (KNV)
ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ಯೆರೆಮಿಯ 18 : 12 (KNV)
ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
ಯೆರೆಮಿಯ 18 : 13 (KNV)
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಯೆರೆಮಿಯ 18 : 14 (KNV)
ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
ಯೆರೆಮಿಯ 18 : 15 (KNV)
ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
ಯೆರೆಮಿಯ 18 : 16 (KNV)
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
ಯೆರೆಮಿಯ 18 : 17 (KNV)
ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
ಯೆರೆಮಿಯ 18 : 18 (KNV)
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
ಯೆರೆಮಿಯ 18 : 19 (KNV)
ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
ಯೆರೆಮಿಯ 18 : 20 (KNV)
ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
ಯೆರೆಮಿಯ 18 : 21 (KNV)
ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ಯೆರೆಮಿಯ 18 : 22 (KNV)
ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.
ಯೆರೆಮಿಯ 18 : 23 (KNV)
ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
❮
❯