ಯೆರೆಮಿಯ 2 : 1 (KNV)
ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಯೆರೆಮಿಯ 2 : 2 (KNV)
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ಯೆರೆಮಿಯ 2 : 3 (KNV)
ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 2 : 4 (KNV)
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಯೆರೆಮಿಯ 2 : 5 (KNV)
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಯೆರೆಮಿಯ 2 : 6 (KNV)
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ಯೆರೆಮಿಯ 2 : 7 (KNV)
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಯೆರೆಮಿಯ 2 : 8 (KNV)
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಯೆರೆಮಿಯ 2 : 9 (KNV)
ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
ಯೆರೆಮಿಯ 2 : 10 (KNV)
ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
ಯೆರೆಮಿಯ 2 : 11 (KNV)
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ಯೆರೆಮಿಯ 2 : 12 (KNV)
ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 2 : 13 (KNV)
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಯೆರೆಮಿಯ 2 : 14 (KNV)
ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
ಯೆರೆಮಿಯ 2 : 15 (KNV)
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
ಯೆರೆಮಿಯ 2 : 16 (KNV)
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
ಯೆರೆಮಿಯ 2 : 17 (KNV)
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ಯೆರೆಮಿಯ 2 : 18 (KNV)
ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
ಯೆರೆಮಿಯ 2 : 19 (KNV)
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ಯೆರೆಮಿಯ 2 : 20 (KNV)
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಯೆರೆಮಿಯ 2 : 21 (KNV)
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಯೆರೆಮಿಯ 2 : 22 (KNV)
ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
ಯೆರೆಮಿಯ 2 : 23 (KNV)
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ಯೆರೆಮಿಯ 2 : 24 (KNV)
ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
ಯೆರೆಮಿಯ 2 : 25 (KNV)
ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
ಯೆರೆಮಿಯ 2 : 26 (KNV)
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಯೆರೆಮಿಯ 2 : 27 (KNV)
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ಯೆರೆಮಿಯ 2 : 28 (KNV)
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಯೆರೆಮಿಯ 2 : 29 (KNV)
ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 2 : 30 (KNV)
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಯೆರೆಮಿಯ 2 : 31 (KNV)
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಯೆರೆಮಿಯ 2 : 32 (KNV)
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಯೆರೆಮಿಯ 2 : 33 (KNV)
ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
ಯೆರೆಮಿಯ 2 : 34 (KNV)
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ಯೆರೆಮಿಯ 2 : 35 (KNV)
ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ಯೆರೆಮಿಯ 2 : 36 (KNV)
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.
ಯೆರೆಮಿಯ 2 : 37 (KNV)
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
❮
❯