ಯೆರೆಮಿಯ 3 : 1 (KNV)
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 3 : 2 (KNV)
ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
ಯೆರೆಮಿಯ 3 : 3 (KNV)
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಯೆರೆಮಿಯ 3 : 4 (KNV)
ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
ಯೆರೆಮಿಯ 3 : 5 (KNV)
ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
ಯೆರೆಮಿಯ 3 : 6 (KNV)
ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
ಯೆರೆಮಿಯ 3 : 7 (KNV)
ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
ಯೆರೆಮಿಯ 3 : 8 (KNV)
ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
ಯೆರೆಮಿಯ 3 : 9 (KNV)
ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
ಯೆರೆಮಿಯ 3 : 10 (KNV)
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 3 : 11 (KNV)
ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
ಯೆರೆಮಿಯ 3 : 12 (KNV)
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ಯೆರೆಮಿಯ 3 : 13 (KNV)
ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 3 : 14 (KNV)
ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
ಯೆರೆಮಿಯ 3 : 15 (KNV)
ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
ಯೆರೆಮಿಯ 3 : 16 (KNV)
ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
ಯೆರೆಮಿಯ 3 : 17 (KNV)
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ಯೆರೆಮಿಯ 3 : 18 (KNV)
ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
ಯೆರೆಮಿಯ 3 : 19 (KNV)
ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ಯೆರೆಮಿಯ 3 : 20 (KNV)
ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 3 : 21 (KNV)
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ಯೆರೆಮಿಯ 3 : 22 (KNV)
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಯೆರೆಮಿಯ 3 : 23 (KNV)
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ಯೆರೆಮಿಯ 3 : 24 (KNV)
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.
ಯೆರೆಮಿಯ 3 : 25 (KNV)
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
❮
❯