ಯೆರೆಮಿಯ 35 : 1 (KNV)
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
ಯೆರೆಮಿಯ 35 : 2 (KNV)
ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
ಯೆರೆಮಿಯ 35 : 3 (KNV)
ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
ಯೆರೆಮಿಯ 35 : 4 (KNV)
ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
ಯೆರೆಮಿಯ 35 : 5 (KNV)
ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
ಯೆರೆಮಿಯ 35 : 6 (KNV)
ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
ಯೆರೆಮಿಯ 35 : 7 (KNV)
ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
ಯೆರೆಮಿಯ 35 : 8 (KNV)
ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
ಯೆರೆಮಿಯ 35 : 9 (KNV)
ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
ಯೆರೆಮಿಯ 35 : 10 (KNV)
ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
ಯೆರೆಮಿಯ 35 : 11 (KNV)
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
ಯೆರೆಮಿಯ 35 : 12 (KNV)
ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
ಯೆರೆಮಿಯ 35 : 13 (KNV)
ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 35 : 14 (KNV)
ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ಯೆರೆಮಿಯ 35 : 15 (KNV)
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
ಯೆರೆಮಿಯ 35 : 16 (KNV)
ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
ಯೆರೆಮಿಯ 35 : 17 (KNV)
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ಯೆರೆಮಿಯ 35 : 18 (KNV)
ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
ಯೆರೆಮಿಯ 35 : 19 (KNV)
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
❮
❯