ಯೆರೆಮಿಯ 47 : 1 (KNV)
ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
ಯೆರೆಮಿಯ 47 : 2 (KNV)
ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
ಯೆರೆಮಿಯ 47 : 3 (KNV)
ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
ಯೆರೆಮಿಯ 47 : 4 (KNV)
ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
ಯೆರೆಮಿಯ 47 : 5 (KNV)
ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
ಯೆರೆಮಿಯ 47 : 6 (KNV)
ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.
ಯೆರೆಮಿಯ 47 : 7 (KNV)
ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
❮
❯