ಯೆಹೆಜ್ಕೇಲನು 27 : 1 (KNV)
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಯೆಹೆಜ್ಕೇಲನು 27 : 2 (KNV)
ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
ಯೆಹೆಜ್ಕೇಲನು 27 : 3 (KNV)
ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
ಯೆಹೆಜ್ಕೇಲನು 27 : 4 (KNV)
ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
ಯೆಹೆಜ್ಕೇಲನು 27 : 5 (KNV)
ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
ಯೆಹೆಜ್ಕೇಲನು 27 : 6 (KNV)
ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
ಯೆಹೆಜ್ಕೇಲನು 27 : 7 (KNV)
ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
ಯೆಹೆಜ್ಕೇಲನು 27 : 8 (KNV)
ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
ಯೆಹೆಜ್ಕೇಲನು 27 : 9 (KNV)
ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
ಯೆಹೆಜ್ಕೇಲನು 27 : 10 (KNV)
ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
ಯೆಹೆಜ್ಕೇಲನು 27 : 11 (KNV)
ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
ಯೆಹೆಜ್ಕೇಲನು 27 : 12 (KNV)
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
ಯೆಹೆಜ್ಕೇಲನು 27 : 13 (KNV)
ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
ಯೆಹೆಜ್ಕೇಲನು 27 : 14 (KNV)
ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
ಯೆಹೆಜ್ಕೇಲನು 27 : 15 (KNV)
ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
ಯೆಹೆಜ್ಕೇಲನು 27 : 16 (KNV)
ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
ಯೆಹೆಜ್ಕೇಲನು 27 : 17 (KNV)
ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
ಯೆಹೆಜ್ಕೇಲನು 27 : 18 (KNV)
ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
ಯೆಹೆಜ್ಕೇಲನು 27 : 19 (KNV)
ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
ಯೆಹೆಜ್ಕೇಲನು 27 : 20 (KNV)
ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
ಯೆಹೆಜ್ಕೇಲನು 27 : 21 (KNV)
ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
ಯೆಹೆಜ್ಕೇಲನು 27 : 22 (KNV)
ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
ಯೆಹೆಜ್ಕೇಲನು 27 : 23 (KNV)
ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
ಯೆಹೆಜ್ಕೇಲನು 27 : 24 (KNV)
ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
ಯೆಹೆಜ್ಕೇಲನು 27 : 25 (KNV)
ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
ಯೆಹೆಜ್ಕೇಲನು 27 : 26 (KNV)
ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
ಯೆಹೆಜ್ಕೇಲನು 27 : 27 (KNV)
ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
ಯೆಹೆಜ್ಕೇಲನು 27 : 28 (KNV)
ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
ಯೆಹೆಜ್ಕೇಲನು 27 : 29 (KNV)
ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
ಯೆಹೆಜ್ಕೇಲನು 27 : 30 (KNV)
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
ಯೆಹೆಜ್ಕೇಲನು 27 : 31 (KNV)
ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
ಯೆಹೆಜ್ಕೇಲನು 27 : 32 (KNV)
ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
ಯೆಹೆಜ್ಕೇಲನು 27 : 33 (KNV)
ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
ಯೆಹೆಜ್ಕೇಲನು 27 : 34 (KNV)
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
ಯೆಹೆಜ್ಕೇಲನು 27 : 35 (KNV)
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
ಯೆಹೆಜ್ಕೇಲನು 27 : 36 (KNV)
ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: