ಯೆಹೆಜ್ಕೇಲನು 3 : 1 (KNV)
ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
ಯೆಹೆಜ್ಕೇಲನು 3 : 2 (KNV)
ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು.
ಯೆಹೆಜ್ಕೇಲನು 3 : 3 (KNV)
ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
ಯೆಹೆಜ್ಕೇಲನು 3 : 4 (KNV)
ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
ಯೆಹೆಜ್ಕೇಲನು 3 : 5 (KNV)
ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
ಯೆಹೆಜ್ಕೇಲನು 3 : 6 (KNV)
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಯೆಹೆಜ್ಕೇಲನು 3 : 7 (KNV)
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
ಯೆಹೆಜ್ಕೇಲನು 3 : 8 (KNV)
ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
ಯೆಹೆಜ್ಕೇಲನು 3 : 9 (KNV)
ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
ಯೆಹೆಜ್ಕೇಲನು 3 : 10 (KNV)
ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
ಯೆಹೆಜ್ಕೇಲನು 3 : 11 (KNV)
ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
ಯೆಹೆಜ್ಕೇಲನು 3 : 12 (KNV)
ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
ಯೆಹೆಜ್ಕೇಲನು 3 : 13 (KNV)
ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
ಯೆಹೆಜ್ಕೇಲನು 3 : 14 (KNV)
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಯೆಹೆಜ್ಕೇಲನು 3 : 15 (KNV)
ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
ಯೆಹೆಜ್ಕೇಲನು 3 : 16 (KNV)
ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
ಯೆಹೆಜ್ಕೇಲನು 3 : 17 (KNV)
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಯೆಹೆಜ್ಕೇಲನು 3 : 18 (KNV)
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ಯೆಹೆಜ್ಕೇಲನು 3 : 19 (KNV)
ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ಯೆಹೆಜ್ಕೇಲನು 3 : 20 (KNV)
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
ಯೆಹೆಜ್ಕೇಲನು 3 : 21 (KNV)
ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
ಯೆಹೆಜ್ಕೇಲನು 3 : 22 (KNV)
ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
ಯೆಹೆಜ್ಕೇಲನು 3 : 23 (KNV)
ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
ಯೆಹೆಜ್ಕೇಲನು 3 : 24 (KNV)
ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
ಯೆಹೆಜ್ಕೇಲನು 3 : 25 (KNV)
ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
ಯೆಹೆಜ್ಕೇಲನು 3 : 26 (KNV)
ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಯೆಹೆಜ್ಕೇಲನು 3 : 27 (KNV)
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27