ಯೆಹೆಜ್ಕೇಲನು 34 : 1 (KNV)
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಯೆಹೆಜ್ಕೇಲನು 34 : 2 (KNV)
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ಯೆಹೆಜ್ಕೇಲನು 34 : 3 (KNV)
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ಯೆಹೆಜ್ಕೇಲನು 34 : 4 (KNV)
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ಯೆಹೆಜ್ಕೇಲನು 34 : 5 (KNV)
ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
ಯೆಹೆಜ್ಕೇಲನು 34 : 6 (KNV)
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ಯೆಹೆಜ್ಕೇಲನು 34 : 7 (KNV)
ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಯೆಹೆಜ್ಕೇಲನು 34 : 8 (KNV)
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
ಯೆಹೆಜ್ಕೇಲನು 34 : 9 (KNV)
ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಯೆಹೆಜ್ಕೇಲನು 34 : 10 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
ಯೆಹೆಜ್ಕೇಲನು 34 : 11 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
ಯೆಹೆಜ್ಕೇಲನು 34 : 12 (KNV)
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
ಯೆಹೆಜ್ಕೇಲನು 34 : 13 (KNV)
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ಯೆಹೆಜ್ಕೇಲನು 34 : 14 (KNV)
ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
ಯೆಹೆಜ್ಕೇಲನು 34 : 15 (KNV)
ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 34 : 16 (KNV)
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ಯೆಹೆಜ್ಕೇಲನು 34 : 17 (KNV)
ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
ಯೆಹೆಜ್ಕೇಲನು 34 : 18 (KNV)
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ಯೆಹೆಜ್ಕೇಲನು 34 : 19 (KNV)
ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
ಯೆಹೆಜ್ಕೇಲನು 34 : 20 (KNV)
ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
ಯೆಹೆಜ್ಕೇಲನು 34 : 21 (KNV)
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
ಯೆಹೆಜ್ಕೇಲನು 34 : 22 (KNV)
ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
ಯೆಹೆಜ್ಕೇಲನು 34 : 23 (KNV)
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ಯೆಹೆಜ್ಕೇಲನು 34 : 24 (KNV)
ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
ಯೆಹೆಜ್ಕೇಲನು 34 : 25 (KNV)
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ಯೆಹೆಜ್ಕೇಲನು 34 : 26 (KNV)
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಯೆಹೆಜ್ಕೇಲನು 34 : 27 (KNV)
ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
ಯೆಹೆಜ್ಕೇಲನು 34 : 28 (KNV)
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
ಯೆಹೆಜ್ಕೇಲನು 34 : 29 (KNV)
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
ಯೆಹೆಜ್ಕೇಲನು 34 : 30 (KNV)
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 34 : 31 (KNV)
ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31