ಯೆಹೆಜ್ಕೇಲನು 7 : 1 (KNV)
ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ--
ಯೆಹೆಜ್ಕೇಲನು 7 : 2 (KNV)
ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
ಯೆಹೆಜ್ಕೇಲನು 7 : 3 (KNV)
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಯೆಹೆಜ್ಕೇಲನು 7 : 4 (KNV)
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ಯೆಹೆಜ್ಕೇಲನು 7 : 5 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ಯೆಹೆಜ್ಕೇಲನು 7 : 6 (KNV)
ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
ಯೆಹೆಜ್ಕೇಲನು 7 : 7 (KNV)
ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
ಯೆಹೆಜ್ಕೇಲನು 7 : 8 (KNV)
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಯೆಹೆಜ್ಕೇಲನು 7 : 9 (KNV)
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಯೆಹೆಜ್ಕೇಲನು 7 : 10 (KNV)
ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
ಯೆಹೆಜ್ಕೇಲನು 7 : 11 (KNV)
ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
ಯೆಹೆಜ್ಕೇಲನು 7 : 12 (KNV)
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ಯೆಹೆಜ್ಕೇಲನು 7 : 13 (KNV)
ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
ಯೆಹೆಜ್ಕೇಲನು 7 : 14 (KNV)
ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
ಯೆಹೆಜ್ಕೇಲನು 7 : 15 (KNV)
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಯೆಹೆಜ್ಕೇಲನು 7 : 16 (KNV)
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
ಯೆಹೆಜ್ಕೇಲನು 7 : 17 (KNV)
ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
ಯೆಹೆಜ್ಕೇಲನು 7 : 18 (KNV)
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
ಯೆಹೆಜ್ಕೇಲನು 7 : 19 (KNV)
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
ಯೆಹೆಜ್ಕೇಲನು 7 : 20 (KNV)
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
ಯೆಹೆಜ್ಕೇಲನು 7 : 21 (KNV)
ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
ಯೆಹೆಜ್ಕೇಲನು 7 : 22 (KNV)
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
ಯೆಹೆಜ್ಕೇಲನು 7 : 23 (KNV)
ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
ಯೆಹೆಜ್ಕೇಲನು 7 : 24 (KNV)
ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
ಯೆಹೆಜ್ಕೇಲನು 7 : 25 (KNV)
ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
ಯೆಹೆಜ್ಕೇಲನು 7 : 26 (KNV)
ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.
ಯೆಹೆಜ್ಕೇಲನು 7 : 27 (KNV)
ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27