ಯೆಹೆಜ್ಕೇಲನು 9 : 1 (KNV)
ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
ಯೆಹೆಜ್ಕೇಲನು 9 : 2 (KNV)
ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
ಯೆಹೆಜ್ಕೇಲನು 9 : 3 (KNV)
ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
ಯೆಹೆಜ್ಕೇಲನು 9 : 4 (KNV)
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ಯೆಹೆಜ್ಕೇಲನು 9 : 5 (KNV)
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಯೆಹೆಜ್ಕೇಲನು 9 : 6 (KNV)
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ಯೆಹೆಜ್ಕೇಲನು 9 : 7 (KNV)
ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
ಯೆಹೆಜ್ಕೇಲನು 9 : 8 (KNV)
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ಯೆಹೆಜ್ಕೇಲನು 9 : 9 (KNV)
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಯೆಹೆಜ್ಕೇಲನು 9 : 10 (KNV)
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.
ಯೆಹೆಜ್ಕೇಲನು 9 : 11 (KNV)
ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.

1 2 3 4 5 6 7 8 9 10 11