ದಾನಿಯೇಲನು 2 : 1 (KNV)
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ದಾನಿಯೇಲನು 2 : 2 (KNV)
ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
ದಾನಿಯೇಲನು 2 : 3 (KNV)
ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
ದಾನಿಯೇಲನು 2 : 4 (KNV)
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
ದಾನಿಯೇಲನು 2 : 5 (KNV)
ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
ದಾನಿಯೇಲನು 2 : 6 (KNV)
ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
ದಾನಿಯೇಲನು 2 : 7 (KNV)
ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
ದಾನಿಯೇಲನು 2 : 8 (KNV)
ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.
ದಾನಿಯೇಲನು 2 : 9 (KNV)
ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
ದಾನಿಯೇಲನು 2 : 10 (KNV)
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ದಾನಿಯೇಲನು 2 : 11 (KNV)
ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
ದಾನಿಯೇಲನು 2 : 12 (KNV)
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ದಾನಿಯೇಲನು 2 : 13 (KNV)
ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
ದಾನಿಯೇಲನು 2 : 14 (KNV)
ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
ದಾನಿಯೇಲನು 2 : 15 (KNV)
ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
ದಾನಿಯೇಲನು 2 : 16 (KNV)
ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
ದಾನಿಯೇಲನು 2 : 17 (KNV)
ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
ದಾನಿಯೇಲನು 2 : 18 (KNV)
ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
ದಾನಿಯೇಲನು 2 : 19 (KNV)
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ದಾನಿಯೇಲನು 2 : 20 (KNV)
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ದಾನಿಯೇಲನು 2 : 21 (KNV)
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ದಾನಿಯೇಲನು 2 : 22 (KNV)
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ದಾನಿಯೇಲನು 2 : 23 (KNV)
ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
ದಾನಿಯೇಲನು 2 : 24 (KNV)
ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
ದಾನಿಯೇಲನು 2 : 25 (KNV)
ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
ದಾನಿಯೇಲನು 2 : 26 (KNV)
ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ದಾನಿಯೇಲನು 2 : 27 (KNV)
ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
ದಾನಿಯೇಲನು 2 : 28 (KNV)
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ದಾನಿಯೇಲನು 2 : 29 (KNV)
ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
ದಾನಿಯೇಲನು 2 : 30 (KNV)
ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
ದಾನಿಯೇಲನು 2 : 31 (KNV)
ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
ದಾನಿಯೇಲನು 2 : 32 (KNV)
ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
ದಾನಿಯೇಲನು 2 : 33 (KNV)
ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
ದಾನಿಯೇಲನು 2 : 34 (KNV)
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ದಾನಿಯೇಲನು 2 : 35 (KNV)
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ದಾನಿಯೇಲನು 2 : 36 (KNV)
ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
ದಾನಿಯೇಲನು 2 : 37 (KNV)
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ದಾನಿಯೇಲನು 2 : 38 (KNV)
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ದಾನಿಯೇಲನು 2 : 39 (KNV)
ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
ದಾನಿಯೇಲನು 2 : 40 (KNV)
ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
ದಾನಿಯೇಲನು 2 : 41 (KNV)
ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
ದಾನಿಯೇಲನು 2 : 42 (KNV)
ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
ದಾನಿಯೇಲನು 2 : 43 (KNV)
ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
ದಾನಿಯೇಲನು 2 : 44 (KNV)
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ದಾನಿಯೇಲನು 2 : 45 (KNV)
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
ದಾನಿಯೇಲನು 2 : 46 (KNV)
ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
ದಾನಿಯೇಲನು 2 : 47 (KNV)
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ದಾನಿಯೇಲನು 2 : 48 (KNV)
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.
ದಾನಿಯೇಲನು 2 : 49 (KNV)
ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49