ಹೋಶೇ 4 : 1 (KNV)
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಹೋಶೇ 4 : 2 (KNV)
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ಹೋಶೇ 4 : 3 (KNV)
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ಹೋಶೇ 4 : 4 (KNV)
ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
ಹೋಶೇ 4 : 5 (KNV)
ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
ಹೋಶೇ 4 : 6 (KNV)
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಹೋಶೇ 4 : 7 (KNV)
ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
ಹೋಶೇ 4 : 8 (KNV)
ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
ಹೋಶೇ 4 : 9 (KNV)
ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
ಹೋಶೇ 4 : 10 (KNV)
ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
ಹೋಶೇ 4 : 11 (KNV)
ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
ಹೋಶೇ 4 : 12 (KNV)
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ಹೋಶೇ 4 : 13 (KNV)
ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
ಹೋಶೇ 4 : 14 (KNV)
ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
ಹೋಶೇ 4 : 15 (KNV)
ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
ಹೋಶೇ 4 : 16 (KNV)
ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
ಹೋಶೇ 4 : 17 (KNV)
ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
ಹೋಶೇ 4 : 18 (KNV)
ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
ಹೋಶೇ 4 : 19 (KNV)
ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.

1 2 3 4 5 6 7 8 9 10 11 12 13 14 15 16 17 18 19

BG:

Opacity:

Color:


Size:


Font: