ಯಾಜಕಕಾಂಡ 11 : 1 (KNV)
ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ
ಯಾಜಕಕಾಂಡ 11 : 2 (KNV)
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:
ಯಾಜಕಕಾಂಡ 11 : 3 (KNV)
ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
ಯಾಜಕಕಾಂಡ 11 : 4 (KNV)
ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
ಯಾಜಕಕಾಂಡ 11 : 5 (KNV)
ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
ಯಾಜಕಕಾಂಡ 11 : 6 (KNV)
ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
ಯಾಜಕಕಾಂಡ 11 : 7 (KNV)
ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
ಯಾಜಕಕಾಂಡ 11 : 8 (KNV)
ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
ಯಾಜಕಕಾಂಡ 11 : 9 (KNV)
ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
ಯಾಜಕಕಾಂಡ 11 : 10 (KNV)
ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
ಯಾಜಕಕಾಂಡ 11 : 11 (KNV)
ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
ಯಾಜಕಕಾಂಡ 11 : 12 (KNV)
ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
ಯಾಜಕಕಾಂಡ 11 : 13 (KNV)
ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
ಯಾಜಕಕಾಂಡ 11 : 14 (KNV)
ರಣಹದ್ದು, ಅದರ ಜಾತಿಯ ಹದ್ದು;
ಯಾಜಕಕಾಂಡ 11 : 15 (KNV)
ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
ಯಾಜಕಕಾಂಡ 11 : 16 (KNV)
ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,
ಯಾಜಕಕಾಂಡ 11 : 17 (KNV)
ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;
ಯಾಜಕಕಾಂಡ 11 : 18 (KNV)
ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು,
ಯಾಜಕಕಾಂಡ 11 : 19 (KNV)
ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
ಯಾಜಕಕಾಂಡ 11 : 20 (KNV)
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
ಯಾಜಕಕಾಂಡ 11 : 21 (KNV)
ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.
ಯಾಜಕಕಾಂಡ 11 : 22 (KNV)
ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
ಯಾಜಕಕಾಂಡ 11 : 23 (KNV)
ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
ಯಾಜಕಕಾಂಡ 11 : 24 (KNV)
ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 25 (KNV)
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 26 (KNV)
ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 27 (KNV)
ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 28 (KNV)
ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
ಯಾಜಕಕಾಂಡ 11 : 29 (KNV)
ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
ಯಾಜಕಕಾಂಡ 11 : 30 (KNV)
ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.
ಯಾಜಕಕಾಂಡ 11 : 31 (KNV)
ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 32 (KNV)
ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
ಯಾಜಕಕಾಂಡ 11 : 33 (KNV)
ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
ಯಾಜಕಕಾಂಡ 11 : 34 (KNV)
ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
ಯಾಜಕಕಾಂಡ 11 : 35 (KNV)
ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
ಯಾಜಕಕಾಂಡ 11 : 36 (KNV)
ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
ಯಾಜಕಕಾಂಡ 11 : 37 (KNV)
ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
ಯಾಜಕಕಾಂಡ 11 : 38 (KNV)
ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
ಯಾಜಕಕಾಂಡ 11 : 39 (KNV)
ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 11 : 40 (KNV)
ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 11 : 41 (KNV)
ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
ಯಾಜಕಕಾಂಡ 11 : 42 (KNV)
ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
ಯಾಜಕಕಾಂಡ 11 : 43 (KNV)
ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
ಯಾಜಕಕಾಂಡ 11 : 44 (KNV)
ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
ಯಾಜಕಕಾಂಡ 11 : 45 (KNV)
ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ಯಾಜಕಕಾಂಡ 11 : 46 (KNV)
ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.
ಯಾಜಕಕಾಂಡ 11 : 47 (KNV)
ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47