ಯಾಜಕಕಾಂಡ 19 : 1 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ--
ಯಾಜಕಕಾಂಡ 19 : 2 (KNV)
ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
ಯಾಜಕಕಾಂಡ 19 : 3 (KNV)
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 19 : 4 (KNV)
ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 19 : 5 (KNV)
ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
ಯಾಜಕಕಾಂಡ 19 : 6 (KNV)
ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
ಯಾಜಕಕಾಂಡ 19 : 7 (KNV)
ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
ಯಾಜಕಕಾಂಡ 19 : 8 (KNV)
ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
ಯಾಜಕಕಾಂಡ 19 : 9 (KNV)
ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
ಯಾಜಕಕಾಂಡ 19 : 10 (KNV)
ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 19 : 11 (KNV)
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ಯಾಜಕಕಾಂಡ 19 : 12 (KNV)
ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
ಯಾಜಕಕಾಂಡ 19 : 13 (KNV)
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ಯಾಜಕಕಾಂಡ 19 : 14 (KNV)
ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ಯಾಜಕಕಾಂಡ 19 : 15 (KNV)
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ಯಾಜಕಕಾಂಡ 19 : 16 (KNV)
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಯಾಜಕಕಾಂಡ 19 : 17 (KNV)
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ಯಾಜಕಕಾಂಡ 19 : 18 (KNV)
ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
ಯಾಜಕಕಾಂಡ 19 : 19 (KNV)
ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
ಯಾಜಕಕಾಂಡ 19 : 20 (KNV)
ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
ಯಾಜಕಕಾಂಡ 19 : 21 (KNV)
ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
ಯಾಜಕಕಾಂಡ 19 : 22 (KNV)
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 19 : 23 (KNV)
ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
ಯಾಜಕಕಾಂಡ 19 : 24 (KNV)
ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
ಯಾಜಕಕಾಂಡ 19 : 25 (KNV)
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 19 : 26 (KNV)
ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
ಯಾಜಕಕಾಂಡ 19 : 27 (KNV)
ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ಯಾಜಕಕಾಂಡ 19 : 28 (KNV)
ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
ಯಾಜಕಕಾಂಡ 19 : 29 (KNV)
ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
ಯಾಜಕಕಾಂಡ 19 : 30 (KNV)
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ಯಾಜಕಕಾಂಡ 19 : 31 (KNV)
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 19 : 32 (KNV)
ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ಯಾಜಕಕಾಂಡ 19 : 33 (KNV)
ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
ಯಾಜಕಕಾಂಡ 19 : 34 (KNV)
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
ಯಾಜಕಕಾಂಡ 19 : 35 (KNV)
ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
ಯಾಜಕಕಾಂಡ 19 : 36 (KNV)
ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.
ಯಾಜಕಕಾಂಡ 19 : 37 (KNV)
ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37