ಯಾಜಕಕಾಂಡ 23 : 1 (KNV)
ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
ಯಾಜಕಕಾಂಡ 23 : 2 (KNV)
ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
ಯಾಜಕಕಾಂಡ 23 : 3 (KNV)
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ಯಾಜಕಕಾಂಡ 23 : 4 (KNV)
ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
ಯಾಜಕಕಾಂಡ 23 : 5 (KNV)
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
ಯಾಜಕಕಾಂಡ 23 : 6 (KNV)
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ಯಾಜಕಕಾಂಡ 23 : 7 (KNV)
ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಯಾಜಕಕಾಂಡ 23 : 8 (KNV)
ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಯಾಜಕಕಾಂಡ 23 : 9 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
ಯಾಜಕಕಾಂಡ 23 : 10 (KNV)
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಯಾಜಕಕಾಂಡ 23 : 11 (KNV)
ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
ಯಾಜಕಕಾಂಡ 23 : 12 (KNV)
ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
ಯಾಜಕಕಾಂಡ 23 : 13 (KNV)
ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
ಯಾಜಕಕಾಂಡ 23 : 14 (KNV)
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ಯಾಜಕಕಾಂಡ 23 : 15 (KNV)
ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
ಯಾಜಕಕಾಂಡ 23 : 16 (KNV)
ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
ಯಾಜಕಕಾಂಡ 23 : 17 (KNV)
ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
ಯಾಜಕಕಾಂಡ 23 : 18 (KNV)
ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
ಯಾಜಕಕಾಂಡ 23 : 19 (KNV)
ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
ಯಾಜಕಕಾಂಡ 23 : 20 (KNV)
ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
ಯಾಜಕಕಾಂಡ 23 : 21 (KNV)
ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ಯಾಜಕಕಾಂಡ 23 : 22 (KNV)
ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕಕಾಂಡ 23 : 23 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
ಯಾಜಕಕಾಂಡ 23 : 24 (KNV)
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
ಯಾಜಕಕಾಂಡ 23 : 25 (KNV)
ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
ಯಾಜಕಕಾಂಡ 23 : 26 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
ಯಾಜಕಕಾಂಡ 23 : 27 (KNV)
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ಯಾಜಕಕಾಂಡ 23 : 28 (KNV)
ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
ಯಾಜಕಕಾಂಡ 23 : 29 (KNV)
ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
ಯಾಜಕಕಾಂಡ 23 : 30 (KNV)
ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
ಯಾಜಕಕಾಂಡ 23 : 31 (KNV)
ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.
ಯಾಜಕಕಾಂಡ 23 : 32 (KNV)
ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
ಯಾಜಕಕಾಂಡ 23 : 33 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಯಾಜಕಕಾಂಡ 23 : 34 (KNV)
ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
ಯಾಜಕಕಾಂಡ 23 : 35 (KNV)
ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
ಯಾಜಕಕಾಂಡ 23 : 36 (KNV)
ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಯಾಜಕಕಾಂಡ 23 : 37 (KNV)
ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
ಯಾಜಕಕಾಂಡ 23 : 38 (KNV)
ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
ಯಾಜಕಕಾಂಡ 23 : 39 (KNV)
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
ಯಾಜಕಕಾಂಡ 23 : 40 (KNV)
ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
ಯಾಜಕಕಾಂಡ 23 : 41 (KNV)
ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
ಯಾಜಕಕಾಂಡ 23 : 42 (KNV)
ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
ಯಾಜಕಕಾಂಡ 23 : 43 (KNV)
ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.
ಯಾಜಕಕಾಂಡ 23 : 44 (KNV)
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44